ADVERTISEMENT

ಸಾವರ್ಕರ್ ಕುರಿತು ಹೇಳಿಕೆ: ರಾಹುಲ್ ಗಾಂಧಿಗೆ ಜಾಮೀನು ಮಂಜೂರು

ಪಿಟಿಐ
Published 10 ಜನವರಿ 2025, 13:36 IST
Last Updated 10 ಜನವರಿ 2025, 13:36 IST
<div class="paragraphs"><p>ರಾಹುಲ್ ಗಾಂಧಿ</p></div>

ರಾಹುಲ್ ಗಾಂಧಿ

   

– ಪಿಟಿಐ ಚಿತ್ರ

ಪುಣೆ: ಹಿಂದುತ್ವ ಪ್ರತಿಪಾದಕ ವಿ.ಡಿ. ಸಾವರ್ಕರ್ ಕುರಿತು ಆಕ್ಷೇಪಾರ್ಹ ಹೇಳಿಕೆಗೆ ಸಂಬಂಧಿಸಿದಂತೆ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಪುಣೆಯ ವಿಶೇಷ ನ್ಯಾಯಾಲಯವು ಇಂದು (ಶುಕ್ರವಾರ) ಜಾಮೀನು ಮಂಜೂರು ಮಾಡಿದೆ.

ADVERTISEMENT

ಲೋಕಸಭೆ ವಿರೋಧ ಪಕ್ಷದ ನಾಯಕರೂ ಆಗಿರುವ ರಾಹುಲ್ ಗಾಂಧಿ, ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾದರು.

ನ್ಯಾಯಾಲಯವು ₹25,000 ಶ್ಯೂರಿಟಿ ಬಾಂಡ್‌ ಆಧಾರದಲ್ಲಿ ಜಾಮೀನು ಮಂಜೂರು ಮಾಡಿತು. ಕಾಂಗ್ರೆಸ್ ನಾಯಕ ಮೋಹನ್ ಜೋಶಿ ಜಾಮೀನುದಾರರಾಗಿ ನಿಂತರು.

ಪ್ರಕರಣದ ವಿಚಾರಣೆಗೆ ಹಾಜರಾಗುವ ಪ್ರಕ್ರಿಯೆಯಿಂದ ನ್ಯಾಯಾಲಯ ವಿನಾಯಿತಿ ನೀಡಿದೆ ಎಂದು ರಾಹುಲ್ ಪರ ವಕೀಲ ಮಿಲಿಂದ್ ಪವಾರ್ ತಿಳಿಸಿದರು.

ಸಾವರ್ಕರ್ ಅವರ ಮೊಮ್ಮಗ ದಾಖಲಿಸಿದ ಮಾನನಷ್ಟ ಮೊಕದ್ದಮೆ ಪ್ರಕರಣದ ಮುಂದಿನ ವಿಚಾರಣೆ ಫೆಬ್ರುವರಿ 18ಕ್ಕೆ ನಡೆಯಲಿದೆ ಎಂದು ಅವರು ಮಾಹಿತಿ ನೀಡಿದರು.

2023ರ ಮಾರ್ಚ್‌ನಲ್ಲಿ ರಾಹುಲ್ ಗಾಂಧಿ ಅವರು ಲಂಡನ್‌ನಲ್ಲಿ ಮಾಡಿದ್ದ ಭಾಷಣದಲ್ಲಿ ವಿ.ಡಿ. ಸಾವರ್ಕರ್ ಅವರು ತಮ್ಮ ಐದಾರು ಸ್ನೇಹಿತರೊಂದಿಗೆ ಸೇರಿಕೊಂಡು ಮುಸ್ಲಿಂ ವ್ಯಕ್ತಿಯನ್ನು ಹೊಡೆದು ಖುಷಿಪಟ್ಟಿದ್ದಾಗಿ ಪುಸಕ್ತದಲ್ಲಿ ಬರೆದುಕೊಂಡಿದ್ದರು ಎಂದು ಆರೋಪಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.