ADVERTISEMENT

ಕೊರಿಯರ್ ಡೆಲಿವರಿಏಜೆಂಟ್ ಸೋಗಿನಲ್ಲಿ ಫ್ಲ್ಯಾಟ್‌ಗೆ ನುಗ್ಗಿ ಯುವತಿ ಮೇಲೆ ಅತ್ಯಾಚಾರ

ಪಿಟಿಐ
Published 3 ಜುಲೈ 2025, 4:29 IST
Last Updated 3 ಜುಲೈ 2025, 4:29 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

Credit: iStock Photo

ಪುಣೆ: ಕೊರಿಯರ್ ಡೆಲಿವರಿ ಏಜೆಂಟ್ ಎಂದು ಹೇಳಿಕೊಂಡು ಅಪರಿಚಿತ ವ್ಯಕ್ತಿಯೊಬ್ಬ ಫ್ಲ್ಯಾಟ್‌ಗೆ ಪ್ರವೇಶಿಸಿ 22 ವರ್ಷದ ಯುವತಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ADVERTISEMENT

ಮಹಾರಾಷ್ಟ್ರದ ಪುಣೆ ನಗರದ ಕೊಂಧ್ವಾ ಪ್ರದೇಶದ ಹೌಸಿಂಗ್ ಸೊಸೈಟಿಯಲ್ಲಿ ಬುಧವಾರ ರಾತ್ರಿ ಈ ಘಟನೆ ನಡೆದಿದೆ.

ಫ್ಲ್ಯಾಟ್‌ನಲ್ಲಿ ಯುವತಿ ಒಬ್ಬಳೆ ಇದ್ದಳು. ಆಕೆಯ ಸಹೋದರ ಕೆಲಸಕ್ಕೆ ಹೋಗಿದ್ದ. ಬುಧವಾರ ರಾತ್ರಿ 8 ಗಂಟೆ ಸುಮಾರಿಗೆ ಕೊರಿಯರ್ ಡೆಲಿವರಿ ಏಜೆಂಟ್ ಎಂದು ಹೇಳಿಕೊಂಡು ಬಂದ ವ್ಯಕ್ತಿಯೊಬ್ಬ ಫ್ಲ್ಯಾಟ್‌ಗೆ ಪ್ರವೇಶಿಸಿ ಯುವತಿ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆರೋಪಿಯು ಯುವತಿ ಮೇಲೆ ಪೆಪ್ಪರ್ ಸ್ಪ್ರೇ ಮಾಡಿ ಕೃತ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ. ಘಟನೆಯ ಬಗ್ಗೆ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.