ADVERTISEMENT

ಪುಣೆ | ಯುವತಿಗೆ ಲೈಂಗಿಕ ದೌರ್ಜನ್ಯ, ಮೂವರು ಮಹಿಳೆಯರ ಬಳಿ ಚಿನ್ನಾಭರಣ ದರೋಡೆ

ಪಿಟಿಐ
Published 1 ಜುಲೈ 2025, 4:39 IST
Last Updated 1 ಜುಲೈ 2025, 4:39 IST
   

ಪುಣೆ: ಮಹಾರಾಷ್ಟ್ರದ ಪುಣೆ ಜಿಲ್ಲೆಯ ಹೆದ್ದಾರಿಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ 17 ವರ್ಷದ ಯುವತಿಯ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಲೈಂಗಿಕ ದೌರ್ಜನ್ಯ ಎಸಗಿ, ಮೂವರು ಮಹಿಳೆಯರಿಂದ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ 73 ವರ್ಷದ ಚಾಲಕ, ಮೂವರು ಮಹಿಳೆಯರು, 17 ವರ್ಷದ ಇಬ್ಬರು ಯುವಕರು ಮತ್ತು ಸಂತಸ್ತ ಯುವತಿ ಪ್ರಯಾಣಿಸುತ್ತಿದ್ದರು. ಸೋಮವಾರ ದೌಂಡ್ ಪ್ರದೇಶದ ಹೆದ್ದಾರಿಯಲ್ಲಿರುವ ಭಿಗ್ವಾನ್ ಗ್ರಾಮದ ಬಳಿ ಶೌಚಾಲಯಕ್ಕೆ ತೆರಳಲು ಚಾಲಕ ಕಾರನ್ನು ನಿಲ್ಲಿಸಿದ್ದ. ಈ ಸಂದರ್ಭದಲ್ಲಿ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಮಾರಕಾಸ್ತ್ರಗಳನ್ನು ತೋರಿಸಿ ಮಹಿಳೆಯರ ಚಿನ್ನಾಭರಣ ದೋಚಿದ್ದಾರೆ. ಬಳಿಕ ಯುವತಿಯನ್ನು ಕಾರಿನಿಂದ ಹೊರಗೆಳೆದು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

ಮಹಿಳೆಯರು ಸೇರಿದಂತೆ ಇತರರು ಪುಣೆ ಜಿಲ್ಲೆಯ ಜುನ್ನಾರ್ ತಹಸಿಲ್‌ ಮೂಲದವರಾಗಿದ್ದು, ನೆರೆಯ ಸೋಲಾಪುರ ಜಿಲ್ಲೆಯ ಪಂಢರಪುರ ದೇವಾಲಯ ಪಟ್ಟಣಕ್ಕೆ ತೆರಳುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ADVERTISEMENT

ಈ ಸಂಬಂಧ ಭಾರತೀಯ ನ್ಯಾಯ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳನ್ನು ಪತ್ತೆಗಾಗಿ ಎಂಟು ತಂಡಗಳನ್ನು ರಚಿಸಲಾಗಿದೆ ಎಂದು ಪುಣೆ (ಗ್ರಾಮೀಣ) ಪೊಲೀಸ್ ವರಿಷ್ಠಾಧಿಕಾರಿ ಸಂದೀಪ್ ಸಿಂಗ್ ಗಿಲ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.