ಪುಣೆ: ಜಿಲ್ಲೆಯ ಗುಡ್ಡಗಾಡು ಪ್ರದೇಶದಲ್ಲಿ ಸಾಗುತ್ತಿದ್ದ ಪಿಕ್‌ಅಪ್ ವ್ಯಾನ್ ಕಂದಕಕ್ಕೆ ಬಿದ್ದ ಪರಿಣಾಮ ದೇವಸ್ಥಾನಕ್ಕೆ ಹೊರಟಿದ್ದ ಮಹಿಳೆಯರು ಹಾಗೂ ಮಕ್ಕಳನ್ನು ಒಳಗೊಂಡಂತೆ ಏಳು ಜನ ಸೋಮವಾರ ಮೃತಪಟ್ಟಿದ್ದಾರೆ.
ಶ್ರಾವಣ ಮಾಸದ ಪ್ರಯುಕ್ತ ಖೇಡ್ ತಹಸಿಲ್‌ನಲ್ಲಿರುವ ಕುಂದೇಶ್ವರ ದೇವಸ್ಥಾನಕ್ಕೆ ಇವರು ತೆರಳುತ್ತಿದ್ದರು.
ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 30 ರಿಂದ 35 ಪ್ರಯಾಣಿಕರು ಪಿಕ್-ಅಪ್ ವ್ಯಾನ್‌ನಲ್ಲಿ ಪ್ರಯಾಣಿಸುವಾಗ ಘಟ್ಟ ಪ್ರದೇಶದ ತಿರುವಿನಲ್ಲಿ ಸಾಗುತ್ತಿದ್ದ ವಾಹನ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದಿದೆ. ಪರಿಣಾಮ ಏಳು ಜನ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆಂದು ಪಿಂಪ್ರಿ ಚಿಂಚ್‌ವಾಡ್ ಪೊಲೀಸರು ಮಾಹಿತಿ ನೀಡಿದ್ದಾರೆ.
ಗಾಯಳುಗಳನ್ನು ಹತ್ತಿರದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು ಅಪಘಾತಕ್ಕೆ ಒಳಗಾದವರು ಪಾಪಲ್ವಾಡಿ ಗ್ರಾಮದವರೆಂದು ಹೇಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.