ADVERTISEMENT

ಪಂಜಾಬ್‌ | ಶಸ್ತ್ರಾಸ್ತ್ರ ಅಕ್ರಮ ಸಾಗಣೆ: ನಾಲ್ವರ ಬಂಧನ

ಪಿಟಿಐ
Published 23 ಜುಲೈ 2025, 13:49 IST
Last Updated 23 ಜುಲೈ 2025, 13:49 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಂಡೀಗಢ: ಗಡಿಯಾಚೆಗಿನ ಶಸ್ತ್ರಾಸ್ತ್ರ ಕಳ್ಳಸಾಗಣೆಯಲ್ಲಿ ತೊಡಗಿದ್ದ ನಾಲ್ವರನ್ನು ಪಂಜಾಬ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಎರಡು ಪ್ರತ್ಯೇಕ ಕಾರ್ಯಾಚರಣೆ ನಡೆಸಲಾಗಿದ್ದು, ಈ ವೇಳೆ ಎಂಟು ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದಾರೆ. 

ಗುಪ್ತಚರ ಮಾಹಿತಿ ಆಧಾರದ ಮೇಲೆ ಅಮೃತಸರ ಗ್ರಾಮೀಣ ಭಾಗದ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ. ಒಂದು ಕಾರ್ಯಾಚರಣೆಯನ್ನು ಗಡಿ ಭದ್ರತಾ ಪಡೆಯೊಂದಿಗೆ (ಬಿಎಸ್‌ಎಫ್‌) ಜಂಟಿಯಾಗಿ ನಡೆಸಲಾಗಿದೆ. 

ಪ್ರಕರಣ ಸಂಬಂಧ ಎಫ್‌ಐಆರ್‌ ದಾಖಲಿಸಿದ್ದು, ಸಂಪೂರ್ಣ ಜಾಲ ಪತ್ತೆ ಮಾಡಲು ತನಿಖೆ ನಡೆಸಲಾಗುತ್ತಿದೆ. ಬಂಧಿತ ಆರೋಪಿಗಳು ಅಮೃತಸರದ ದಾಂಡೆ ಗ್ರಾಮದವರು ಎಂದು ಪೊಲೀಸರು ಮಾಹಿತಿ ನೀಡಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.