ADVERTISEMENT

ಸಿಎಎ ವಿರುದ್ಧ ಪಂಜಾಬ್‌ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕಾರ

ಪಿಟಿಐ
Published 17 ಜನವರಿ 2020, 19:30 IST
Last Updated 17 ಜನವರಿ 2020, 19:30 IST

ಚಂಡೀಗಡ: ಪಂಜಾಬ್‌ ವಿಧಾನಸಭೆಯಲ್ಲಿ ಶುಕ್ರವಾರ ಪೌರತ್ವ (ತಿದ್ದುಪಡಿ) ಕಾಯಿದೆ(ಸಿಎಎ) ವಿರುದ್ಧದ ನಿರ್ಣಯವನ್ನುಧ್ವನಿಮತದ ಮೂಲಕ ಅಂಗೀಕರಿಸಲಾಯಿತು.

ಸಂಸದೀಯ ವ್ಯವಹಾರಗಳ ಸಚಿವ ಬ್ರಹ್ಮ ಮೊಹಿಂದ್ರಾ ಅವರು ಮಂಡಿಸಿದ್ದ ನಿರ್ಣಯವನ್ನು ಮೂರು ಗಂಟೆಗಳ ಚರ್ಚೆಯ ಬಳಿಕ ಅನುಮೋದಿಸಲಾಯಿತು. ಆಡಳಿತಾರೂಢ ಕಾಂಗ್ರೆಸ್‌ ಮತ್ತು ಪ್ರಮುಖ ವಿರೋಧ ಪಕ್ಷ ಆಮ್ ಆದ್ಮಿ ಪಕ್ಷ (ಎಎಪಿ) ನಿರ್ಣಯವನ್ನು ಬೆಂಬಲಿಸಿದರೆ, ಬಿಜೆಪಿ ವಿರೋಧಿಸಿದೆ.

ಕೇರಳದ ಬಳಿಕ ಸಿಎಎ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿದ ಎರಡನೇ ರಾಜ್ಯ ಪಂಜಾಬ್‌ ಆಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.