ADVERTISEMENT

ವರಿಷ್ಠರು ದುರ್ಬಲ ಮುಖ್ಯಮಂತ್ರಿಯನ್ನು ಬಯಸುತ್ತಿದ್ದಾರೆ: ನವಜೋತ್ ಸಿಂಗ್ ಸಿಧು ಗರಂ

ಪಿಟಿಐ
Published 4 ಫೆಬ್ರುವರಿ 2022, 14:45 IST
Last Updated 4 ಫೆಬ್ರುವರಿ 2022, 14:45 IST
ನವಜೋತ್ ಸಿಂಗ್ ಸಿಧು
ನವಜೋತ್ ಸಿಂಗ್ ಸಿಧು    

ಅಮೃತಸರ: ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನು ಘೋಷಿಸುವ ಮುನ್ನವೇ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಅವರು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ ಅವರು, ‘ದೆಹಲಿಯ ವರಿಷ್ಠರು ತಮ್ಮ ತಾಳಕ್ಕೆ ತಕ್ಕಂತೆ ಕುಣಿಯಬಲ್ಲ ದುರ್ಬಲ ಮುಖ್ಯಮಂತ್ರಿಯನ್ನು ಬಯಸುತ್ತಿದ್ದಾರೆ’ ಎಂದು ಹೇಳಿದ್ದಾರೆ.

ಸಿಧು, ಕಾಂಗ್ರೆಸ್ ಕೇಂದ್ರ ನಾಯಕತ್ವ ಅಥವಾ ಬೇರೆ ಯಾರನ್ನಾದರೂ ಉಲ್ಲೇಖಿಸಿ ಹೇಳಿಕೆ ನೀಡಿರುವ ಬಗ್ಗೆ ಅವರು ಸ್ಪಷ್ಟಪಡಿಸಲಿಲ್ಲ.

ADVERTISEMENT

ಸಿಧು ಅವರು ಕೇಂದ್ರದ ಸರ್ಕಾರವನ್ನು ಉಲ್ಲೇಖಿಸಿ ಹೇಳಿಕೆ ನೀಡಿದ್ದಾರೆ ಎಂದು ಅವರ ಮಾಧ್ಯಮ ಸಲಹೆಗಾರ ಸಮಜಾಯಿಷಿ ನೀಡಿದ್ದಾರೆ.

ಫೆ.6ರಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪಂಜಾಬ್‌ಗೆ ಭೇಟಿ ನೀಡಲಿದ್ದು, ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸುವ ಸಾಧ್ಯತೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಇದರ ಬೆನ್ನಲ್ಲೇ ಸಿಧು ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಹಾಗೂ ನವಜೋತ್ ಸಿಂಗ್ ಸಿಧು ಅವರಲ್ಲಿ ಯಾರು ಮುಖ್ಯಮಂತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.