ಅಮೃತಸರ: ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಪಂಜಾಬ್‌ನ ಎಲ್ಲ ಪಟ್ಟಣ, ನಗರಗಳಲ್ಲಿ ಡಿಸೆಂಬರ್ 1ರಿಂದ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್, 'ಪಂಜಾಬ್‌ನ ಎಲ್ಲ ಪಟ್ಟಣ ಹಾಗೂ ನಗರಗಳಲ್ಲಿ ಡಿಸೆಂಬರ್ 1ರಿಂದ ಕಟ್ಟುನಿಟ್ಟಿನ ಕರ್ಫ್ಯೂ ಜಾರಿಗೊಳಿಸಲಾಗುವುದು. ರಾತ್ರಿ 10ರಿಂದ ಬೆಳಿಗ್ಗೆ 5ರ ವರೆಗೆ ಕರ್ಫ್ಯೂ ಇರಲಿದ್ದು, ಶಿಸ್ತು ಉಲ್ಲಂಘಿಸಿದವರಿಗೆ ಒಂದು ಸಾವಿರ ರೂ.ಗಳ ವರೆಗೂ ದಂಡ ವಿಧಿಸಿಲಾಗುವುದು' ಎಂದು ತಿಳಿಸಿದ್ದಾರೆ.
ಕೊರೊನಾ ಸೋಂಕು ಪ್ರಕರಣಗಳು ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಗುಜರಾತ್ ಮತ್ತು ರಾಜಸ್ಥಾನಗಳ ಹಲವು ನಗರಗಳಲ್ಲಿ ರಾತ್ರಿ ಕರ್ಫ್ಯೂ ಹೇರಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.