ADVERTISEMENT

ಕೇಜ್ರಿವಾಲ್‌ ಭೇಟಿಗೆ ಅವಕಾಶ ನೀಡುವಂತೆ ಪತ್ರ ಬರೆದ ಪಂಜಾಬ್‌ ಸಿಎಂ ಭಗವಂತ ಮಾನ್‌

ಪಿಟಿಐ
Published 3 ಏಪ್ರಿಲ್ 2024, 15:37 IST
Last Updated 3 ಏಪ್ರಿಲ್ 2024, 15:37 IST
<div class="paragraphs"><p>ಭಗವಂತ್‌ ಮಾನ್‌ </p></div>

ಭಗವಂತ್‌ ಮಾನ್‌

   

-ಪಿಟಿಐ ಚಿತ್ರ

ಚಂಡೀಗಢ: ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್ ಅವರನ್ನು ಭೇಟಿ ಮಾಡಲು ಅವಕಾಶ ನೀಡುವಂತೆ ಪಂಜಾಬ್‌ ಮುಖ್ಯಮಂತ್ರಿ ಭಗವಂತ ಮಾನ್‌ ಅವರು ತಿಹಾರ ಜೈಲಿನ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದು ಎಎಪಿ ಪಕ್ಷದ ಮೂಲಗಳು ಬುಧವಾರ ತಿಳಿಸಿವೆ.

ADVERTISEMENT

‘ಮುಖ್ಯಮಂತ್ರಿ ಕಚೇರಿಯಿಂದ ಪತ್ರ ರವಾನೆಯಾಗಿದೆ’ ಎಂದು ಮೂಲಗಳು ತಿಳಿಸಿವೆ.

ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ಮಾರ್ಚ್‌ 21ರಂದು ಕೇಜ್ರಿವಾಲ್‌ ಅವರನ್ನು ಬಂಧಿಸಿತ್ತು. ಎಪ್ರಿಲ್‌ 15ರವರೆಗೆ ಕೇಜ್ರಿವಾಲ್‌ ಅವರು ನ್ಯಾಯಾಂಗ ಬಂಧನದಲ್ಲಿರಲಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.