ADVERTISEMENT

ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್‌ಗೆ ಹೊಟ್ಟೆ ನೋವು: ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಜುಲೈ 2022, 5:12 IST
Last Updated 21 ಜುಲೈ 2022, 5:12 IST
ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್
ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್   

ಬೆಂಗಳೂರು: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಭಗವಂತ ಮಾನ್ ಅವರನ್ನು ದೆಹಲಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಈ ಕುರಿತು ಸುದ್ದಿಸಂಸ್ಥೆ ಎಎನ್‌ಐ ಟ್ವೀಟ್ ಮಾಡಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ.

ADVERTISEMENT

ಪಂಜಾಬ್‌ನಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದ ಬಳಿಕ ಭಗವಂತ ಮಾನ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.