ADVERTISEMENT

ನಾಳೆ ಎರಡನೇ ಮದುವೆಯಾಗಲಿರುವ ಪಂಜಾಬ್ ಸಿಎಂ ಭಗವಂತ್ ಮಾನ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 6 ಜುಲೈ 2022, 10:07 IST
Last Updated 6 ಜುಲೈ 2022, 10:07 IST
ಅಕ್ಷಯ್ ಶರ್ಮಾ ಟ್ವಿಟರ್ ಖಾತೆಯ ಚಿತ್ರ
ಅಕ್ಷಯ್ ಶರ್ಮಾ ಟ್ವಿಟರ್ ಖಾತೆಯ ಚಿತ್ರ   

ಚಂಡೀಗಡ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ನಾಳೆ ಎರಡನೇ ವಿವಾಹವಾಗುತ್ತಿದ್ದಾರೆ. ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಸಮ್ಮುಖದಲ್ಲಿ ಚಂಡೀಗಡದ ತಮ್ಮ ನಿವಾಸದಲ್ಲಿ ಅವರು, ವೈದ್ಯೆ. ಗುರುಪ್ರೀತ್ ಕೌರ್ ಅವರ ಕೈಹಿಡಿಯಲಿದ್ದಾರೆ.

ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿಯ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮದುವೆಗೆ ಸಾಕ್ಷಿಯಾಗಲಿದ್ದಾರೆ.

ಸುಮಾರು 6 ವರ್ಷಗಳ ಹಿಂದೆ ಮಾನ್ ತಮ್ಮ ಮೊದಲ ಪತ್ನಿಯಿಂದ ವಿಚ್ಚೇದನ ಪಡೆದಿದ್ದರು. ಮಾನ್ ಅವರ ಮೊದಲ ಪತ್ನಿ ಮತ್ತು ಇಬ್ಬರು ಮಕ್ಕಳು ಅಮೆರಿಕ ವಾಸವಿದ್ದಾರೆ. ಇಬ್ಬರೂ ಮಕ್ಕಳು ತಮ್ಮ ತಂದೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸಂದರ್ಭ ಸಮಾರಂಭಕ್ಕೆ ಆಗಮಿಸಿದ್ದರು.

ADVERTISEMENT

ಭಗವಂತ್ ಮಾನ್ ಅವರ ತಾಯಿ ಮತ್ತು ಸಹೋದರಿ, ವಧುವನ್ನು ಆಯ್ಕೆ ಮಾಡಿದ್ದಾರೆ ಎಂದು ವರದಿಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.