ADVERTISEMENT

ರೈತರೊಂದಿಗೆ ಮಾತುಕತೆ ನಡೆಸಲು ಕೇಂದ್ರ ಸರ್ಕಾರ ಮುಂದಾಗಲಿ: ಪಂಜಾಬ್‌ ಸಿಎಂ

ಏಜೆನ್ಸೀಸ್
Published 27 ನವೆಂಬರ್ 2020, 7:40 IST
Last Updated 27 ನವೆಂಬರ್ 2020, 7:40 IST
ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌
ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌   

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯು ಗಂಭೀರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರ್ಕಾರವು ರೈತ ಸಂಘಟನೆಗಳೊಂದಿಗೆ ಮಾತುಕತೆ ನಡೆಸಬೇಕೆಂದು ಪಂಜಾಬ್‌ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್‌ ಆಗ್ರಹಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, 'ದೆಹಲಿ ಗಡಿಯಲ್ಲಿನ ಉದ್ವಿಗ್ನ ಪರಿಸ್ಥಿತಿಯನ್ನು ತಗ್ಗಿಸಲು ಕೇಂದ್ರ ಸರ್ಕಾರವು ರೈತ ಸಂಘಟನೆಗಳೊಂದಿಗೆ ಮಾತುಕತೆ ಆರಂಭಿಸಬೇಕು' ಎಂದು ಹೇಳಿದ್ದಾರೆ.

ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿ ಕೇಂದ್ರ ಸರ್ಕಾರ ತಂದಿರುವ ಹೊಸ ಕಾಯ್ದೆಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ಪಂಜಾಬ್‌ನ ರೈತರು ನಡೆಸುತ್ತಿರುವ ‘ದೆಹಲಿ ಚಲೊ’ ಪ್ರತಿಭಟನಾ ಮೆರವಣಿಗೆ ತಡೆಯುವ ಪ್ರಯತ್ನ ನಡೆಸಲಾಗಿದೆ.

ADVERTISEMENT

ದೆಹಲಿ-ಬಹದ್ದೂರ್‌ಗಢ ಹೆದ್ದಾರಿ ಬಳಿಯ ಟಿಕ್ರಿ ಗಡಿಯಲ್ಲಿ ಶುಕ್ರವಾರ ಬೆಳಿಗ್ಗೆ ಪ್ರತಿಭಟನಾ ನಿರತ ರೈತರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಮತ್ತು ಅಶ್ರುವಾಯು ಬಳಸಿದ್ದಾರೆ.

ಪ್ರತಿಭಟನಾ ನಿರತ ರೈತರ ದೆಹಲಿ ಪ್ರವೇಶ ತಡೆಯಲು ಅಂಬಾಲಾ ಹತ್ತಿರದ ಹರಿಯಾಣ ಮತ್ತು ಪಂಜಾಬ್ ನಡುವಿನ ಶಂಭು ಗಡಿಯಲ್ಲಿ ಭಾರಿ ಭದ್ರತೆ ಕೈಗೊಳ್ಳಲಾಗಿದೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.