ADVERTISEMENT

ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಮನವಿ ಮಾಡಿದ ಪಂಜಾಬ್ ಸಿಎಂ

ಪಿಟಿಐ
Published 16 ಜನವರಿ 2022, 6:05 IST
Last Updated 16 ಜನವರಿ 2022, 6:05 IST
ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ
ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ   

ಚಂಡೀಗಢ: ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಮುಂದೂಡಬೇಕೆಂದು ಕೋರಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದಾರೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಸಿಎಂ ಚನ್ನಿ ಪತ್ರ ಬರೆದಿದ್ದು, ವಿಧಾನಸಭಾ ಚುನಾವಣೆಯನ್ನು ಕನಿಷ್ಠ ಆರು ದಿನಗಳವರೆಗೆ ಮುಂದೂಡಬೇಕು ಎಂದಿದ್ದಾರೆ.

ಗುರು ರವಿದಾಸ್ ಜಯಂತಿ ಹಿನ್ನೆಲೆಯಲ್ಲಿ ಚನ್ನಿ ಅವರು ಈ ಮನವಿ ಮಾಡಿಕೊಂಡಿದ್ದಾರೆ.

ADVERTISEMENT

ಪಂಜಾಬ್‌ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರುವರಿ 14ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನಡೆಯಲಿದೆ.

ಗುರು ರವಿದಾಸ್ ಅವರ ಜನ್ಮ ದಿನಾಚರಣೆಯ ಸಂದರ್ಭ, ಫೆ. 10ರಿಂದ 16ರವರೆಗಿನ ಅವಧಿಯಲ್ಲಿ ಸುಮಾರು 20 ಲಕ್ಷದಷ್ಟು ಸಂಖ್ಯೆಯ ಜನರು ಉತ್ತರ ಪ್ರದೇಶದ ಬನಾರಸ್‌ಗೆ ತೆರಳುತ್ತಾರೆ. ಇದರಿಂದ ಅವರು ಮತದಾನದಿಂದ ವಂಚಿತರಾಗುತ್ತಾರೆ. ಹೀಗಾಗಿ ಅವರಿಗೂ ಮತದಾನದ ಅವಕಾಶ ಕಲ್ಪಿಸುವ ಸಲುವಾಗಿ ಚುನಾವಣೆಯನ್ನು ಮುಂದೂಡಬೇಕು ಎಂದಿ ಚನ್ನಿ ಕೇಳಿಕೊಂಡಿದ್ದಾರೆ.

ಈ ಮೊದಲು ಬಹುಜನ ಸಮಾಜ ಪಕ್ಷದ ಪಂಜಾಬ್ ಮುಖ್ಯಸ್ಥ ಜಸ್ವೀರ್ ಸಿಂಗ್ ಗಾರ್ಹಿ, ಚುನಾವಣೆ ಮುಂದೂಡುವಂತೆ ಆಯೋಗವನ್ನು ಕೇಳಿಕೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.