ADVERTISEMENT

ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ: ಇ.ಡಿ ದಾಳಿ ವಿರುದ್ಧ ಪಂಜಾಬ್ ಸಿಎಂ ಚನ್ನಿ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 18 ಜನವರಿ 2022, 8:39 IST
Last Updated 18 ಜನವರಿ 2022, 8:39 IST
ಚರಣ್‌ಜಿತ್ ಸಿಂಗ್ ಚನ್ನಿ
ಚರಣ್‌ಜಿತ್ ಸಿಂಗ್ ಚನ್ನಿ   

ಚಂಡೀಗಡ: ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಸಂದರ್ಭದಲ್ಲಿ ತಮ್ಮನ್ನು ಗುರಿಯಾಗಿಸಲಾಗುತ್ತಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಕೇಂದ್ರ ಸರ್ಕಾರದ ವಿರುದ್ಧ ಆರೋಪ ಮಾಡಿದ್ದಾರೆ.

ಚೆನ್ನಿ ಅವರ ಅಳಿಯ ಭೂಪೇಂದ್ರ ಸಿಂಗ್ ಹನಿ ಸೇರಿದಂತೆ ಹಲವರ ಮನೆ ಮೇಲೆ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಮಂಗಳವಾರ ದಾಳಿ ನಡೆಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಚನ್ನಿ, ಅವರು (ಕೇಂದ್ರ ಸರ್ಕಾರ) ನನ್ನನ್ನು ಗುರಿಯಾಗಿಸುತ್ತಿದ್ದಾರೆ. ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ನನ್ನ ಮೇಲೆ ಒತ್ತಡ ಹೇರಲು ಯತ್ನಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವಕ್ಕೆ ಒಳ್ಳೆಯದಲ್ಲ. ಈ ವಿಚಾರದಲ್ಲಿ ಹೋರಾಟ ಮಾಡಲು ನಾವು ಸಿದ್ದರಿದ್ದೇವೆ. ಪಶ್ಚಿಮ ಬಂಗಾಳ ಚುನಾವಣೆ ಸಂದರ್ಭದಲ್ಲಿಯೂ ಇದೇ ರೀತಿ ನಡೆದಿತ್ತು ಎಂದು ಚನ್ನಿ ಹೇಳಿರುವುದಾಗಿ ‘ಎಎನ್‌ಐ’ ಸುದ್ದಿಸಂಸ್ಥೆ ಟ್ವೀಟ್ ಮಾಡಿದೆ.

ADVERTISEMENT

ಚುನಾವಣೆಯ ಹಿನ್ನೆಲೆಯಲ್ಲಿ ಹಣ ಅಕ್ರಮ ವರ್ಗಾವಣೆಯ ದೂರುಗಳು ಬಂದಿದ್ದರಿಂದ ಇ.ಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಭೂಪೆಂದ್ರ ಸಿಂಗ್ ಹನಿ ವಿರುದ್ಧವೂ ಹಣ ಅಕ್ರಮ ವರ್ಗಾವಣೆ ಹಾಗೂ ಕಾನೂನುಬಾಹಿರ ಅಕ್ರಮ ಮರಳು ದಂಧೆಯಲ್ಲಿ ಶಾಮೀಲಾದ ಆರೋಪ ಕೇಳಿಬಂದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.