ADVERTISEMENT

ಮಾನನಷ್ಟ ಪ್ರಕರಣ: ಖುದ್ದು ಹಾಜರಾಗುವಂತೆ ಕಂಗನಾಗೆ ಕೋರ್ಟ್ ಸಮನ್ಸ್‌

ಪಿಟಿಐ
Published 30 ಸೆಪ್ಟೆಂಬರ್ 2025, 5:15 IST
Last Updated 30 ಸೆಪ್ಟೆಂಬರ್ 2025, 5:15 IST
ಕಂಗನಾ ರನೌತ್
ಕಂಗನಾ ರನೌತ್    

ಬಟಿಂಡಾ(ಪಂಜಾಬ್): ಮಾನನಷ್ಟ ಮೊಕದ್ದಮೆ ‍ಪ್ರಕರಣಕ್ಕೆ ಸಂಬಂಧಿಸಿದಂತೆ ಅ. 27ರಂದು ಖುದ್ದಾಗಿ ಹಾಜರಾಗುವಂತೆ ಸಂಸದೆ, ನಟಿ ಕಂಗನಾ ರನೌತ್ ಅವರಿಗೆ ಇಲ್ಲಿನ ನ್ಯಾಯಾಲಯ ಸೋಮವಾರ ಸೂಚನೆ ನೀಡಿದೆ.

ಇದೇ ವೇಳೆ ವಿಡಿಯೋ ಕಾನ್ಫರೆನ್ಸ್‌ ಮೂಲಕ ಹಾಜರಾಗಲು ಅವಕಾಶ ನೀಡುವಂತೆ ಕೋರಿ ಸಲ್ಲಿಸಿದ್ದ ಅವರ ಮನವಿಯನ್ನು ತಿರಸ್ಕರಿಸಿದೆ.

2021ರಲ್ಲಿ ರೈತರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೃದ್ಧ ಮಹಿಳೆ ಮಹಿಂದರ್ ಕೌರ್ ಅವರನ್ನು ಗುರಿಯಾಗಿಸಿ ಕಂಗನಾ ಟ್ವೀಟ್ ಮಾಡಿದ್ದರು. ಇದರ ವಿರುದ್ಧ ಮಹಿಳೆ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ADVERTISEMENT

‘ಶಾಹೀನ್ ಬಾಗ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಮಹಿಳೆ ನಾನೇ ಎಂದು ಸುಳ್ಳು ಹೇಳಿದ್ದಲ್ಲದೇ, ನನ್ನ ಬಗ್ಗೆ ಮಾನಹಾನಿಕಾರವಾಗಿ ಮಾತನಾಡಿದ್ದಾರೆ’ ಎಂದು ಕೌರ್ ತಮ್ಮ ದೂರಿನಲ್ಲಿ ಹೇಳಿದ್ದಾರೆ.

ಏನತ್ಮಧ್ಯೆ, ಪ್ರಕರಣವನ್ನು ವಜಾಗೊಳಿಸುವಂತೆ ಕಂಗನಾ ಸಲ್ಲಿಸಿದ್ದ ಅರ್ಜಿಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ಗಳು ತಿರಸ್ಕರಿಸಿವೆ. ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲಿಯೂ ಅವರಿಗೆ ಹಿನ್ನೆಡೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.