ಚಂಡೀಗಢ: ವಯಸ್ಕರೊಂದಿಗೆ ಭಿಕ್ಷೆ ಬೇಡುವ ಮಕ್ಕಳ ಡಿಎನ್‌ಎ ಪರೀಕ್ಷೆ ನಡೆಸಿ, ಅವರ ನಡುವಿನ ಸಂಬಂಧದ ಬಗ್ಗೆ ಪರಿಶೀಲನೆ ನಡೆಸುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೆ ಪಂಜಾಬ್ ಸರ್ಕಾರ ಸೂಚಿಸಿದೆ.
ಮಕ್ಕಳ ಕಳ್ಳಸಾಗಾಣಿಕೆ ಮತ್ತು ಶೋಷಣೆ ತಡೆಯುವ ಉದ್ದೇಶದಿಂದ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ.
ಸಾಮಾಜಿಕ ಭಧ್ರತೆ, ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ ಸಚಿವ ಬಲಜೀತ್ ಕೌರ್ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ.
ಡಿಎನ್‌ಎ ಪರೀಕ್ಷೆ ಫಲಿತಾಂಶ ಲಭ್ಯವಾಗುವವರೆಗೆ ಮಗುವನ್ನು ಮಕ್ಕಳ ಕಾಳಜಿ ಕೇಂದ್ರದಲ್ಲಿ ಇರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ವಯಸ್ಕ ವ್ಯಕ್ತಿಗೂ ಮಗುವಿಗೂ ಯಾವುದೇ ಸಂಬಂಧ ಇಲ್ಲದಿರುವುದು ಪತ್ತೆಯಾದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.