ಅಮೃತಸರ: ಪಂಜಾಬ್‌ನಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು, ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ.
ಅಮೃತಸರ ಪೂರ್ವಕ್ಷೇತ್ರದಿಂದ ನವಜೋತ್ ಸಿಂಗ್ ಸಿಧು ಸ್ಪರ್ಧಿಸಲಿದ್ದಾರೆ.
ಇದನ್ನೂ ಓದಿ:ದೇಶ ವಿಭಜಿಸಿದ ವ್ಯಕ್ತಿಯನ್ನು ಅಖಿಲೇಶ್ ಏಕೆ ನೆನಪಿಸಿಕೊಳ್ಳುತ್ತಿದ್ದಾರೆ?: ನಡ್ಡಾ
ಕಳೆದ ಬಾರಿ ಇದೇ ವಿಧಾನಸಭೆ ಕ್ಷೇತ್ರದಿಂದ ಗೆದ್ದು ಬಂದಿರುವ ಸಿಧು, ಶಾಸಕ ಸ್ಥಾನ ಉಳಿಸಿಕೊಳ್ಳುವ ಭರವಸೆಯಲ್ಲಿದ್ದಾರೆ.
ಶಿರೋಮಣಿ ಅಕಾಲಿದಳವು ಇದೇ ಕ್ಷೇತ್ರದಲ್ಲಿ ಮಾಜಿ ಸಚಿವ ಬಿಕ್ರಮ್ ಸಿಂಗ್ ಮಜಿಥಿಯಾ ಅವರನ್ನು ಕಣಕ್ಕಿಳಿಸಿದೆ.
ಪಂಬಾಜ್‌ನಲ್ಲಿ ಫೆಬ್ರುವರಿ 14ರಂದು ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಮತ ಎಣಿಕೆ ನೆರವೇರಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.