ADVERTISEMENT

ಪಂಜಾಬ್‌ ಸಿಎಂ ಚನ್ನಿ ಅಳಿಯ ಬಂಧನ: ರಾಜಕೀಯ ಪ್ರೇರಿತ ಕೃತ್ಯವೆಂದ ಕಾಂಗ್ರೆಸ್‌

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 4 ಫೆಬ್ರುವರಿ 2022, 5:44 IST
Last Updated 4 ಫೆಬ್ರುವರಿ 2022, 5:44 IST
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ   

ನವದೆಹಲಿ: ಪಂಜಾಬ್ ವಿಧಾನಸಭೆ ಚುನಾವಣೆಗೆ ಕೆಲ ದಿನಗಳು ಬಾಕಿ ಇರುವಾಗಲೇ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಅವರನ್ನು ಜಾರಿ ನಿರ್ದೇಶನಾಲಯವು(ಇ.ಡಿ) ಬಂಧಿಸಿದೆ.

ಈ ಬೆಳವಣಿಗೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್‌ ಪಕ್ಷವು, ಇದು ರಾಜಕೀಯ ಪ್ರೇರಿತ ಕೃತ್ಯವೆಂದು ಹರಿಹಾಯ್ದಿದೆ.

ಈ ಬಗ್ಗೆ ಶುಕ್ರವಾರ ಪ್ರತಿಕ್ರಿಯಿಸಿರುವ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ, ‘ಇದು ರಾಜಕೀಯ ಪ್ರೇರಿತ ಬಂಧನ. ಚನ್ನಿ ಮೇಲೆ ಒತ್ತಡ ಹೇರಲು ಮಾಡಲಾಗಿದೆ’ ಎಂದು ಖಂಡಿಸಿದ್ದಾರೆ.

ADVERTISEMENT

‘ಚನ್ನಿ ಅವರು ಪರಿಶಿಷ್ಟ ಜಾತಿಗೆ ಸೇರಿದ ಮುಖ್ಯಮಂತ್ರಿ. ಅವರ ನೈತಿಕತೆಯನ್ನು ಕುಗ್ಗಿಸಲು ಬಿಜೆಪಿ ಬಯಸಿದೆ’ ಎಂದು ಖರ್ಗೆ ಹೇಳಿದ್ದಾರೆ.

ಫೆ. 20ರಂದು ಚುನಾವಣೆ ನಡೆಯಲಿದ್ದು, ಮಾರ್ಚ್‌ 10ರಂದು ಫಲಿತಾಂಶ ಹೊರಬರಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.