ADVERTISEMENT

ಪಂಜಾಬ್‌: ಮಾಜಿ ಸಚಿವ ಭಾರತ್‌ ಭೂಷಣ್‌ಗೆ ಸೇರಿದ ಸ್ಥಳಗಳಲ್ಲಿ ಇ.ಡಿ. ಶೋಧ

ಪಿಟಿಐ
Published 24 ಆಗಸ್ಟ್ 2023, 16:19 IST
Last Updated 24 ಆಗಸ್ಟ್ 2023, 16:19 IST
ಜಾರಿ ನಿರ್ದೇಶನಾಲಯ 
ಜಾರಿ ನಿರ್ದೇಶನಾಲಯ    

ಚಂಡೀಗಢ: ಹಣ ಅಕ್ರಮ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಪಂಜಾಬ್‌ನ ಮಾಜಿ ಸಚಿವ ಹಾಗೂ ಕಾಂಗ್ರೆಸ್‌ ಮುಖಂಡ ಭಾರತ್‌ ಭೂಷಣ್‌ ಆಶು ಅವರಿಗೆ ಸೇರಿದ ಸ್ಥಳಗಳಲ್ಲಿ ಜಾರಿ ನಿರ್ದೇಶನಾಲಯದ (ಇ.ಡಿ) ಅಧಿಕಾರಿಗಳು ಗುರುವಾರ ಶೋಧ ನಡೆಸಿದ್ದಾರೆ.

ಲುಧಿಯಾನಾ ಮತ್ತು ಸಮೀಪ ಪ್ರದೇಶಗಳ ಹತ್ತು ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ ಎಂದು ಮೂಲಗಳು ತಿಳಿಸಿವೆ. ಭಾರತ್‌ ಭೂಷಣ್‌ ಅವರ ಆಪ್ತರಿಗೆ ಸೇರಿದ ಸ್ಥಳಗಳಲ್ಲೂ ಶೋಧ ನಡೆದಿದೆ.

ಭಾರತ್‌ ಭೂಷಣ್‌ ಅವರು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವರಾಗಿದ್ದಾಗ ಟೆಂಡರ್‌ ಪ್ರಕ್ರಿಯೆಯಲ್ಲಿ ನಡೆದ ಅಕ್ರಮಕ್ಕೆ ಸಂಬಂಧಿಸಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.