
ಪಿಟಿಐ
ಹೋಶಿಯಾರ್‌ಪುರ/ಮೊಗ: 2025ರ ವಿದ್ಯುತ್ (ತಿದ್ದುಪಡಿ) ಮಸೂದೆಯನ್ನು ಹಿಂಪಡೆಯುವುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ, ‘ಸಂಯುಕ್ತ ಕಿಸಾನ್ ಮೋರ್ಚಾ’ ಸಂಘಟನೆಯ ಸದಸ್ಯರು ಪಂಜಾಬ್‌ನ ಹಲವೆಡೆ ಸೋಮವಾರ ಟ್ರ್ಯಾಕ್ಟರ್ ರ್‍ಯಾಲಿ ನಡೆಸಿದರು.
2025ರ ವಿದ್ಯುತ್ ಮಸೂದೆ, ಬೀಜ ಮಸೂದೆಗಳನ್ನು ಹಿಂಪಡೆದುಕೊಳ್ಳುವುದು, ಕಾರ್ಮಿಕ ಸಂಹಿತೆಯನ್ನು ರದ್ದುಗೊಳಿಸುವುದು, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಮರುಸ್ಥಾಪನೆ ಹಾಗೂ ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಗೆ ಕಾನೂನುಬದ್ಧ ಖಾತರಿ ನೀಡುವಂತೆ ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.
ಹೋಶಿಯಾರ್‌ಪುರ, ತಾಂಡಾ ಹಾಗೂ ಮೊಗ ಸೇರಿದಂತೆ ಹಲವು ಸ್ಥಳಗಳಲ್ಲಿ ಟ್ರ್ಯಾಕ್ಟರ್ ರ್‍ಯಾಲಿ ನಡೆಯಿತು. ಹಲವು ರೈತ ಸಂಘಟನೆಗಳ ನಾಯಕರು ಭಾಗಿಯಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.