ADVERTISEMENT

ಪ್ರವಾಹ ಪೀಡಿತ ಪಂಜಾಬ್‌ ಜತೆ ಮೋದಿ ಸರ್ಕಾರ ನಿಲ್ಲುತ್ತದೆ: ಕೇಂದ್ರ ಸಚಿವ ಸಂಜಯ್

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2025, 8:06 IST
Last Updated 19 ಅಕ್ಟೋಬರ್ 2025, 8:06 IST
<div class="paragraphs"><p>ಬಂಡಿ ಸಂಜಯ್‌ ಕುಮಾರ್‌</p></div>

ಬಂಡಿ ಸಂಜಯ್‌ ಕುಮಾರ್‌

   

ಚಂಡೀಗಢ: ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಭೇಟಿ ನೀಡಿ, ಮೋದಿ ಸರ್ಕಾರ ಪಂಜಾಬ್ ಜನರೊಂದಿಗೆ ನಿಲ್ಲುತ್ತದೆ ಎಂದು ಭರವಸೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ. ಕೇಂದ್ರ ಸರ್ಕಾರ ತಕ್ಷಣದ ಪರಿಹಾರ ಕಾರ್ಯಗಳಿಗಾಗಿ ₹1,600 ಕೋಟಿ ಮಂಜೂರು ಮಾಡಿದೆ ಎಂದು ತಿಳಿಸಿದ್ದಾರೆ.

ADVERTISEMENT

ಎರಡು ದಿನಗಳ ರಾಜ್ಯ ಪ್ರವಾಸ ಕೈಗೊಂಡಿರುವ ಅವರು ಶನಿವಾರ ಗುರುದಾಸ್‌ಪುರಕ್ಕೆ ಆಗಮಿಸಿದ್ದಾರೆ. ಪ್ರವಾಹ ಪೀಡಿತ ಪ್ರದೇಶಗಳಿಂದ ಸ್ಥಳಾಂತರಗೊಂಡ ಜನರೊಂದಿಗೆ ಬಂಡಿ ಸಂಜಯ್ ಮಾತುಕತೆ ನಡೆಸಿದ್ದಾರೆ. ಈ ವೇಳೆ ಅವರಿಗೆ ಅಗತ್ಯ ದಿನಸಿ ಸಾಮಗ್ರಿಗಳ 'ಮೋದಿ ಕಿಟ್‌' ಅನ್ನು ವಿತರಿಸಿದ್ದಾರೆ.

ಪ್ರವಾಹದಿಂದ ಮನೆ ಕಳೆದುಕೊಂಡ ಎಲ್ಲರಿಗೂ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಹೊಸ ಮನೆಗಳನ್ನು ಒದಗಿಸಲಾಗುವುದು. ಪ್ರವಾಹದಿಂದ ಉಂಟಾದ ನಷ್ಟದ ಸಂಪೂರ್ಣ ಮಾಹಿತಿ ಬಂದ ನಂತರ ಉಳಿದ ಪರಿಹಾರದ ಹಣವನ್ನು ಕೇಂದ್ರ ಸರ್ಕಾರ ನೀಡುತ್ತದೆ. ಈ ಬಿಕ್ಕಟ್ಟಿನ ಸಮಯದಲ್ಲಿ ರಾಷ್ಟ್ರವು ನಿಮ್ಮೊಂದಿಗೆ ನಿಂತಿದೆ ಎಂದು ಅವರು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.