ನವದೆಹಲಿ: ಪ್ರವಾಹ ಪೀಡಿತ ಪಂಜಾಬ್‌ಗೆ ತಕ್ಷಣವೇ ಪರಿಹಾರ ನೀಡಿ ಎಂದು ಆಗ್ರಹಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದಾರೆ.
ಪ್ರವಾಹ ಪೀಡಿತ ಪಂಜಾಬ್‌ಗೆ ಭೇಟಿ ನೀಡಿರುವ 10 ನಿಮಿಷಗಳ ವಿಡಿಯೊವನ್ನು ರಾಹುಲ್ ಗಾಂಧಿ ಅವರು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಹಂಚಿಕೊಂಡಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಗಡಿಯ ಪ್ರದೇಶಗಳಿಗೆ ಭೇಟಿ ನೀಡಿರುವ ರಾಹುಲ್ ಗಾಂಧಿ, ಪ್ರವಾಹ ಸಂತ್ರಸ್ತರೊಂದಿಗೆ ಸಂವಾದ ನಡೆಸಿದ್ದಾರೆ.
ಪ್ರವಾವ ಪೀಡಿತ ಪ್ರದೇಶಗಳಲ್ಲಿ ಮೂಲಭೂತ ಸೌಕರ್ಯಗಳು ನಾಶವಾಗಿದೆ. ತಕ್ಷಣವೇ ರಸ್ತೆ ಹಾಗೂ ಸೇತುವೆಗಳನ್ನು ನಿರ್ಮಿಸಬೇಕು. ಪ್ರವಾಹದಿಂದಾಗಿ ಲಕ್ಷಾಂತರ ಮನೆಗಳು ಹಾಗೂ 4 ಲಕ್ಷ ಎಕರೆ ಕೃಷಿ ಹಾನಿಗೊಳಗಾಗಿದೆ ಎಂದು ತಿಳಿಸಿದ್ದಾರೆ.
ಪ್ರವಾಹದಿಂದಾಗಿ ಪಂಜಾಬ್ ₹ 20,000 ಕೋಟಿ ನಷ್ಟ ಅನುಭವಿಸಿದೆ. ಕೇಂದ್ರ ಸರ್ಕಾರವು ₹ 1,600 ಕೋಟಿ ಪರಿಹಾರವನ್ನು ಘೋಷಿಸಿದ್ದು, ಇದು ರಾಜ್ಯಕ್ಕೆ ಮಾಡಿರುವ ಅನ್ಯಾಯ ಎಂದು ರಾಹುಲ್ ಗಾಂಧಿ ಕಿಡಿಕಾರಿದ್ದಾರೆ.
ಭಾರಿ ಮಳೆಯಿಂದಾಗಿ ಪಂಜಾಬ್‌ನಲ್ಲಿ ಪ್ರವಾಹ ಉಂಟಾಗಿತ್ತು. ರಾಹುಲ್ ಗಾಂಧಿ ಅವರು ಕಳೆದ ಸೋಮವಾರ(ಸೆ.15) ಪಂಜಾಬ್‌ನ ಅಮೃತಸರ ಹಾಗೂ ಗುರುದಾಸಪುರದಲ್ಲಿನ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.