ADVERTISEMENT

ಪಂಜಾಬ್‌ನಲ್ಲಿ ಪ್ರವಾಹ: ವಿಶ್ವವಿದ್ಯಾಲಯಗಳಲ್ಲಿ ಸೆಪ್ಟೆಂಬರ್ 3ರವರೆಗೆ ರಜೆ ಘೋಷಣೆ

​ಪ್ರಜಾವಾಣಿ ವಾರ್ತೆ
Published 1 ಸೆಪ್ಟೆಂಬರ್ 2025, 5:47 IST
Last Updated 1 ಸೆಪ್ಟೆಂಬರ್ 2025, 5:47 IST
<div class="paragraphs"><p>ಚಿತ್ರ ಕೃಪೆ:ಪ್ರಾತಿನಿಧಿಕ ಚಿತ್ರ</p></div>

ಚಿತ್ರ ಕೃಪೆ:ಪ್ರಾತಿನಿಧಿಕ ಚಿತ್ರ

   

ಚಂಡೀಗಢ: ಪಂಜಾಬ್‌ನಲ್ಲಿ ನಿರಂತರ ಮಳೆಯಿಂದ ಪ್ರವಾಹ ಭೀತಿ ಉಂಟಾಗಿದೆ. ಇದರ ಪರಿಣಾಮ ಅಲ್ಲಿನ ಕಾಲೇಜು, ವಿಶ್ವವಿದ್ಯಾಲಯಗಳಿಗೆ ಹಾಗೂ ಪಾಲಿಟೆಕ್ನಿಕ್ ಸಂಸ್ಥೆಗಳಿಗೆ ಆಗಸ್ಟ್ 27 ರಿಂದ 30 ರವರೆಗೆ ಎಲ್ಲಾ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಮಳೆ ಹೆಚ್ಚಾದ ಕಾರಣ ಸೆಪ್ಟೆಂಬರ್ 3 ರವರೆಗೆ ರಜೆ ಮುಂದೂಡಲಾಗಿದೆ.

ಹಿಮಾಚಲ ಪ್ರದೇಶ ಮತ್ತು ಜಮ್ಮು ಮತ್ತು ಕಾಶ್ಮೀರದಲ್ಲಿ ಭಾರಿ ಮಳೆಯಿಂದಾಗಿ ಸಟ್ಲೆಜ್, ಬಿಯಾಸ್ ಮತ್ತು ರಾವಿ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ಪಂಜಾಬ್‌ನಲ್ಲಿ ಭಾರಿ ಪ್ರವಾಹ ಉಂಟಾಗಿದೆ.

ADVERTISEMENT

ಪ್ರವಾಹದಿಂದ ಪಂಜಾಬ್‌ನ ಗುರುದಾಸ್ಪುರ್, ಪಠಾಣ್‌ಕೋಟ್, ಫಜಿಲ್ಕಾ, ಕಪುರ್ತಲಾ, ತರಣ್, ಫಿರೋಜ್‌ಪುರ, ಹೋಶಿಯಾರ್‌ಪುರ್ ಮತ್ತು ಅಮೃತಸರ ಜಿಲ್ಲೆಗಳು ಸಂಪೂರ್ಣ ಜಲಾವೃತ ಆಗಿವೆ.

ಪಂಜಾಬ್‌ನ ಕೆಲವು ಕಾಲೇಜು, ಹಾಸ್ಟೆಲ್​ಗಳು ಪ್ರವಾಹದಲ್ಲಿ ಸಿಲುಕಿವೆ. ವಿದ್ಯಾರ್ಥಿಗಳ ಹಿತ ದೃಷ್ಠಿಯಿಂದ ಅಧಿಕಾರಿಗಳು ಹೊರಡಿಸಿದ ಮಾರ್ಗಸೂಚಿಗಳನ್ನು ಎಲ್ಲರೂ ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ಸಾಮಾಜಿಕ ಮಾಧ್ಯಮದಲ್ಲಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.