ADVERTISEMENT

ಬಿಜೆಪಿ ಸೇರಿದ ಕಾಂಗ್ರೆಸ್‌ ಮುಖಂಡ ಮನ್‌ಪ್ರೀತ್‌ ಸಿಂಗ್‌ ಬಾದಲ್‌

​ಪ್ರಜಾವಾಣಿ ವಾರ್ತೆ
Published 18 ಜನವರಿ 2023, 9:40 IST
Last Updated 18 ಜನವರಿ 2023, 9:40 IST
ಮನ್‌ಪ್ರೀತ್‌ ಸಿಂಗ್‌ ಬಾದಲ್‌
ಮನ್‌ಪ್ರೀತ್‌ ಸಿಂಗ್‌ ಬಾದಲ್‌   

ನವದೆಹಲಿ: ಪಂಜಾಬ್‌ ಕಾಂಗ್ರೆಸ್‌ ಮುಖಂಡ ಮನ್‌ಪ್ರೀತ್‌ ಸಿಂಗ್‌ ಬಾದಲ್‌ ಅವರು ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ದೆಹಲಿಯ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಅವರು ಬುಧವಾರ ಪಕ್ಷಕ್ಕೆ ಸೇರಿದರು. ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ಬಿಜೆಪಿ ಮುಖಂಡರು ಹಾಜರಿದ್ದರು.

ಪಕ್ಷದಲ್ಲಿನ ಪ್ರಚಲಿತ ವಿದ್ಯಮಾನಗಳ ಕುರಿತಾಗಿ ಭ್ರಮನಿರಸನಗೊಂಡಿರುವುದಾಗಿ ಅವರು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.

ADVERTISEMENT

2010ರಲ್ಲಿ ಬಾದಲ್‌ ಪಂಜಾಬ್‌ ಹಣಕಾಸು ಮಂತ್ರಿಯಾಗಿದ್ದರು. ನಂತರ ಪಿಪಲ್ಸ್‌ ಪಾರ್ಟಿ ಆಫ್‌ ಪಂಜಾಬ್‌ (ಪಿಪಿಪಿ) ಪಕ್ಷ ಸ್ಥಾಪನೆ ಮಾಡಿದ್ದರು. 2016ರಲ್ಲಿ ಆ ಪಕ್ಷವನ್ನು ಕಾಂಗ್ರೆಸ್‌ ಜತೆ ವಿಲೀನಗೊಳಿಸಿದ್ದರು.

ಇದೀಗ ಅವರು ಬಿಜೆಪಿ ಪಕ್ಷಕ್ಕೆ ಸೇರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.