ADVERTISEMENT

ಲೂಧಿಯಾನ | ವಿಷಾನಿಲ ಸೋರಿಕೆ: 11 ಮಂದಿ ಸಾವು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 30 ಏಪ್ರಿಲ್ 2023, 5:36 IST
Last Updated 30 ಏಪ್ರಿಲ್ 2023, 5:36 IST
ವಿಷಾನಿಲ ಸೋರಿಕೆಯಾಗಿರುವ ಲೂಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಪರಿಶೀಲನೆ ನಡೆಸಿದರು
ವಿಷಾನಿಲ ಸೋರಿಕೆಯಾಗಿರುವ ಲೂಧಿಯಾನದ ಗಿಯಾಸ್ಪುರ ಪ್ರದೇಶದಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಪರಿಶೀಲನೆ ನಡೆಸಿದರು    –ಪಿಟಿಐ ಚಿತ್ರ

ಲುಧಿಯಾನ (ಪಂಜಾಬ್‌): ಇಲ್ಲಿನ ಜನನಿಬಿಡ ಪ್ರದೇಶವಾದ ಗಿಯಾಸ್ಪುರದಲ್ಲಿ ವಿಷಾನಿಲ ಸೋರಿಕೆಯಿಂದ ಐವರು ಮಹಿಳೆಯರು, ಮೂವರು ಮಕ್ಕಳು ಸೇರಿದಂತೆ ಒಟ್ಟು 11 ಮಂದಿ ಭಾನುವಾರ ಮೃತಪಟ್ಟಿದ್ದಾರೆ.

ತೀವ್ರ ಅಸ್ವಸ್ಥಗೊಂಡಿರುವ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಅಲ್ಲಿನ ಜನರ ಸ್ಥಳಾಂ ತರಕ್ಕೆ ಜಿಲ್ಲಾಡಳಿತ ಮುಂದಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡ (ಎನ್‌ಡಿಆರ್‌ಎಫ್‌), ಜಿಲ್ಲಾಡಳಿತ, ಪೊಲೀಸ್‌ ಇಲಾಖೆ, ನಗರ ಸ್ಥಳೀಯ ಆಡಳಿತ, ಪಂಜಾಬ್‌ನ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧಿಕಾರಿಗಳು ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ.

ಇಡೀ ಪ್ರದೇಶದಲ್ಲಿ ಪೊಲೀಸ್‌ ಭದ್ರತೆ ಹೆಚ್ಚಿಸ ಲಾಗಿದೆ. ಅಗ್ನಿಶಾಮಕ ಮತ್ತು ಆಂಬುಲೆನ್ಸ್‌ ಸಿಬ್ಬಂದಿ ಸ್ಥಳ ದಲ್ಲಿಯೇ ಬೀಡುಬಿಟ್ಟಿದ್ದಾರೆ.

ADVERTISEMENT

ಘಟನೆ ಬಗ್ಗೆ ಮ್ಯಾಜಿಸ್ಟೀರಿಯಲ್‌ ತನಿಖೆಗೆ ಆದೇಶಿಸಲಾಗಿದೆ. ಲುಧಿಯಾನ ಪೊಲೀಸರು ಎಫ್‌ಐಆರ್‌ ದಾಖಲಿಸಿಕೊಂಡಿದ್ದಾರೆ.

ಬೆಳಿಗ್ಗೆ ಮಾರುಕಟ್ಟೆಗೆ ತರಕಾರಿ ಮತ್ತು ಹಾಲು ಖರೀದಿಗೆ ಬಂದ ಕೆಲವರು ಪ್ರಜ್ಞಾಹೀನರಾದಾಗ ಪ್ರಕರಣ ಬಯಲಿಗೆ ಬಂದಿದೆ. ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟರೆ, ಉಳಿದವರು ಆಸ್ಪತ್ರೆಯಲ್ಲಿ ಅಸುನೀಗಿದ್ದಾರೆ. ಇವರೆಲ್ಲರೂ ಉತ್ತರ ಪ್ರದೇಶ, ಬಿಹಾರದಿಂದ ಬಂದಿರುವ ವಲಸಿಗರಾಗಿದ್ದಾರೆ.

‘ಈ ಪ್ರದೇಶದ ವಾತಾವರಣದಲ್ಲಿ ಹೈಡ್ರೋಜನ್ ಸಲ್ಪೈಡ್‌ ಅನಿಲ ಹೆಚ್ಚಿನ ಪ್ರಮಾಣದಲ್ಲಿ ಇರುವುದು ಕಂಡುಬಂದಿದೆ. ಈ ಭಾಗದಲ್ಲಿರುವ ಕಾರ್ಖಾನೆಯವರು ರಾಸಾಯನಿಕ ತ್ಯಾಜ್ಯಗಳನ್ನು ಒಳಚರಂಡಿಗೆ ಸುರಿದಿರ ಬಹುದು. ಅಲ್ಲಿ ವಿಷಾನಿಲ ಉತ್ಪತ್ತಿಯಾಗಿರಬಹುದೆಂದು ಎನ್‌ಡಿಆರ್‌ಎಫ್‌ ತಂಡ ಹೇಳಿದೆ’ ಎಂದು ಜಿಲ್ಲಾಡಳಿತ ತಿಳಿಸಿದೆ.

‘ಮ್ಯಾನ್‌ಹೋಲ್‌ಗಳಿಂದ ರಾಸಾ ಯನಿಕಗಳ ಮಾದರಿ ಸಂಗ್ರಹಿಸಲಾಗಿದೆ. ಮೃತಪಟ್ಟವರು ಉಸಿರಾಟದ ತೊಂದರೆ ಅನುಭವಿಸಿಲ್ಲ. ವಿಷಾನಿಲವು ನೇರವಾಗಿ ನರಮಂಡಲಕ್ಕೆ ಹಾನಿ ಮಾಡಿ ರುವುದರಿಂದ ಅವರು ಮೃತಪಟ್ಟಿರ ಬಹುದು’ ಎಂದು ಲುಧಿಯಾನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

‘ವಿಷಾನಿಲ ಹೇಗೆ ಸೋರಿಕೆಯಾಗಿದೆ ಎಂಬ ಬಗ್ಗೆ ಈ ಪ್ರದೇಶದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಕ್ಯಾಮೆರಾ ದೃಶ್ಯಗಳನ್ನೂ ಪರಿಶೀಲಿಸಲಾಗುತ್ತಿದೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.