ADVERTISEMENT

424 ಗಣ್ಯರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆದ ಪಂಜಾಬ್ ಸರ್ಕಾರ

​ಪ್ರಜಾವಾಣಿ ವಾರ್ತೆ
Published 28 ಮೇ 2022, 10:54 IST
Last Updated 28 ಮೇ 2022, 10:54 IST
ಮುಖ್ಯಮಂತ್ರಿ ಭಗವಂತ್ ಮಾನ್
ಮುಖ್ಯಮಂತ್ರಿ ಭಗವಂತ್ ಮಾನ್   

ಚಂಡೀಗಡ: ಪಂಜಾಬ್‌ರಾಜ್ಯದಲ್ಲಿ 424 ಗಣ್ಯರಿಗೆ ನೀಡಿದ್ದ ಪೊಲೀಸ್‌ ಭದ್ರತೆಯನ್ನು ಎಎಪಿ ಸರ್ಕಾರ ಶನಿವಾರ ಹಿಂತೆಗೆದುಕೊಂಡಿದೆ.

ಮುಖ್ಯಮಂತ್ರಿ ಭಗವಂತ್ ಮಾನ್ ನೇತೃತ್ವದ ಪಂಜಾಬ್ ಸರ್ಕಾರ ಈ ಬಗ್ಗೆ ಮಹತ್ವದ ನಿರ್ಧಾರ ತೆಗೆದುಕೊಂಡಿದೆ. ಈ ಕುರಿತು ಸರ್ಕಾರ ಅಧಿಕೃತವಾಗಿ ಆದೇಶ ಮಾಡಿದೆ. ಸರ್ಕಾರದ ಈ ನಡೆ ಪಂಜಾಬ್‌ ಜನರ ಮೆಚ್ಚುಗೆಗೆ ಪಾತ್ರವಾಗಿದೆ ಎಂದು ಎಎಪಿ ಪಕ್ಷದ ವಕ್ತಾರರೊಬ್ಬರು ಹೇಳಿದ್ದಾರೆ.

ಭದ್ರತೆಯನ್ನು ಹಿಂತೆಗೆದುಕೊಂಡವರಲ್ಲಿ ಅನೇಕ ನಿವೃತ್ತ ಪೊಲೀಸ್ ಅಧಿಕಾರಿಗಳು, ಧಾರ್ಮಿಕ ಮುಖಂಡರು ಮತ್ತು ರಾಜಕೀಯ ನಾಯಕರು ಸೇರಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ADVERTISEMENT

ಕಳೆದಏಪ್ರಿಲ್‌ ತಿಂಗಳಲ್ಲಿ ಮಾಜಿ ಸಚಿವರು, ಮಾಜಿ ಶಾಸಕರು ಮತ್ತು ಇತರ ನಾಯಕರು ಸೇರಿದಂತೆ 184 ಜನರ ಭದ್ರತೆಯನ್ನು ಹಿಂತೆಗೆದುಕೊಳ್ಳಲಾಗಿತ್ತು.

ಮಾಜಿ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ, ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌, ರಣೀಂದರ್‌ ಸಿಂಗ್‌, ಕಾಂಗ್ರೆಸ್‌ ಪ್ರತಾಪ್‌ ಸಿಂಗ್‌ ಸೇರಿದಂತೆ ಹಲವರಿಗೆ ನೀಡಿದ್ದ ಭದ್ರತೆಯನ್ನು ಹಿಂಪಡೆಯಲಾಗಿತ್ತು. ಇದೀಗ ಮತ್ತೆ 424 ಜನರಿಗೆ ಒದಗಿಸಿದ್ದ ಭದ್ರತೆಯನ್ನು ಸರ್ಕಾರ ವಾಪಸ್‌ ಪಡೆದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.