ADVERTISEMENT

ಪಂಜಾಬ್ ರಾಜ್ಯಪಾಲ ಭನ್ವರಿಲಾಲ್ ಪುರೋಹಿತ್ ರಾಜೀನಾಮೆ

ಪಂಜಾಬ್ ರಾಜ್ಯಪಾಲ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದ ಆಡಳಿತಾಧಿಕಾರಿ ಭನ್ವರಿಲಾಲ್ ಪುರೋಹಿತ್ ಅವರು ತಮ್ಮ ಹುದ್ದೆಗೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಪಿಟಿಐ
Published 3 ಫೆಬ್ರುವರಿ 2024, 10:39 IST
Last Updated 3 ಫೆಬ್ರುವರಿ 2024, 10:39 IST
<div class="paragraphs"><p>ಭನ್ವರಿಲಾಲ್ ಪುರೋಹಿತ್ </p></div>

ಭನ್ವರಿಲಾಲ್ ಪುರೋಹಿತ್

   

ಪಿಟಿಐ

ಚಂಡೀಗಢ: ಪಂಜಾಬ್ ರಾಜ್ಯಪಾಲ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಚಂಡೀಗಢದ ಆಡಳಿತಾಧಿಕಾರಿ ಭನ್ವರಿಲಾಲ್ ಪುರೋಹಿತ್ ಅವರು ತಮ್ಮ ಹುದ್ದೆಗೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

ADVERTISEMENT

ನಾನು ನನ್ನ ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ. ನನ್ನ ರಾಜೀನಾಮೆಯನ್ನು ಅಂಗೀಕರಿಸಬೇಕೆಂದು ವಿನಂತಿಸಿಕೊಳ್ಳುತ್ತೇನೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ ರವಾನಿಸಿದ್ದಾರೆ.

ಶುಕ್ರವಾರವಷ್ಟೇ ಪುರೋಹಿತ್ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಬಂದಿದ್ದರು.

ಮಹಾರಾಷ್ಟ್ರದ ನಾಗ್ಪುರದಿಂದ ಮೂರು ಭಾರಿ ಲೋಕಸಭಾ ಸದಸ್ಯರಾಗಿದ್ದ ಪುರೋಹಿತ್ ಅವರು, ಈ ಮೊದಲು ತಮಿಳುನಾಡಿನ ರಾಜ್ಯಪಾಲರಾಗಿಯೂ ಕಾರ್ಯನಿರ್ವಹಿಸಿದ್ದರು.

2021 ರಲ್ಲಿ ಅವರು ಪಂಜಾಬ್ ರಾಜ್ಯಪಾಲ ಹಾಗೂ ಚಂಡೀಗಢದ ಆಡಳಿತಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.