ADVERTISEMENT

ಕೃಷಿ ಮಸೂದೆ ವಿರೋಧಿಸಿ ಪ್ರತಿಭಟನೆ: ಪಂಜಾಬ್‌ನಲ್ಲಿ ರೈಲು ತಡೆ ಮುಂದುವರಿಕೆ

ಏಜೆನ್ಸೀಸ್
Published 26 ಸೆಪ್ಟೆಂಬರ್ 2020, 4:16 IST
Last Updated 26 ಸೆಪ್ಟೆಂಬರ್ 2020, 4:16 IST
ಎಎನ್‌ಐ ಚಿತ್ರ
ಎಎನ್‌ಐ ಚಿತ್ರ   

ಅಮೃತಸರ: ಕೃಷಿ ಮಸೂದೆ ವಿರೋಧಿಸಿ ಪಂಜಾಬ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ‘ಕಿಸಾನ್ ಸಂಘರ್ಷ್ ಕಮಿಟಿ’ಯು ರೈಲು ತಡೆ ಚಳವಳಿ ಮುಂದುವರಿಸಿದೆ.

24ರಿಂದ 26ರ ವರೆಗೆ ರೈಲು ತಡೆ ಹಮ್ಮಿಕೊಂಡಿದ್ದರಿಂದ ಫಿರೋಜ್‌ಪುರ ವಿಭಾಗದಿಂದ ಸಂಚರಿಸಬೇಕಿದ್ದ ವಿಶೇಷ ರೈಲುಗಳು ರದ್ದಾಗಿದ್ದವು. ಇದೀಗ ಪ್ರತಿಭಟನೆಯನ್ನು ಮೂರು ದಿನಗಳ ಕಾಲ ವಿಸ್ತರಿಸಲಾಗಿದೆ.

ಮುಂದಿನ ದಿನಗಳಲ್ಲಿ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸಲಿದ್ದೇವೆ. ಸರ್ಕಾರವು ಮಸೂದೆಗಳನ್ನು ಹಿಂಪಡೆಯುವಂತೆ ಮಾಡಲಿದ್ದೇವೆ ಎಂದು ಸಮಿತಿಯ ಸದಸ್ಯರು ತಿಳಿಸಿದ್ದಾರೆ.

‘ದೇವಿದಾಸಪುರದಲ್ಲಿ ಕಳೆದ ಮೂರು ದಿನಗಳಿಂದ ಧರಣಿ ನಡೆಸುತ್ತಿದ್ದೇವೆ. ಮುಂಜಾನೆ ಪ್ರಾರ್ಥನೆ ಸಲ್ಲಿಸಿ ಧರಣಿ ಕುಳಿತುಕೊಳ್ಳುತ್ತೇವೆ. ಸೆಪ್ಟೆಂಬರ್ 29ರ ವರೆಗೂ ಇದು ಮುಂದುವರಿಯಲಿದೆ. ಪ್ರತಿಭಟನಾಕಾರರ ಸಂಖ್ಯೆ ಹೆಚ್ಚುತ್ತಿದೆ. ಮೋದಿ ಸರ್ಕಾರದ ಅಪಾಯಕರ ಮಸೂದೆಗಳ ವಿರುದ್ಧ ಪ್ರತಿಭಟನೆ ನಡೆಸಲು ಹೆಚ್ಚಿನ ಸಂಖ್ಯೆಯಲ್ಲಿ ಜನರು ಇಲ್ಲಿಗೆ ಬರುತ್ತಿದ್ದಾರೆ’ ಎಂದು ‘ಕಿಸಾನ್ ಸಂಘರ್ಷ್ ಕಮಿಟಿ’ಯ ಕಾರ್ಯದರ್ಶಿ ಗುರುಚರಣ್ ಸಿಂಗ್ ಛಬ್ಬಾ ಹೇಳಿದ್ದಾರೆ.

ವಿರೋಧ ಪಕ್ಷಗಳ ಸದಸ್ಯರ ಭಾರಿ ಗದ್ದಲ, ಪ್ರತಿಭಟನೆ ಮತ್ತು ವಿರೋಧದ ನಡುವೆಯೇ ಕೃಷಿ ಕ್ಷೇತ್ರಕ್ಕೆ ಸಂಬಂಧಿಸಿದ ಎರಡು ಮಸೂದೆಗಳಿಗೆ ಕಳೆದ ಭಾನುವಾರ ರಾಜ್ಯಸಭೆಯಲ್ಲಿ ಧ್ವನಿಮತದ ಅಂಗೀಕಾರ ಪಡೆಯಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.