ADVERTISEMENT

ಕೋವಿಡ್‌ ಏರಿಕೆ: ದೆಹಲಿ ಆಯ್ತು, ಪಂಜಾಬ್‌ನಲ್ಲಿ ಈಗ ಮಾಸ್ಕ್ ಕಡ್ಡಾಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಏಪ್ರಿಲ್ 2022, 9:42 IST
Last Updated 21 ಏಪ್ರಿಲ್ 2022, 9:42 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೋವಿಡ್–19 ಸೋಂಕು ಪ್ರಕರಣ ಏರಿಕೆ ಹಿನ್ನೆಲೆಯಲ್ಲಿ ಪಂಜಾಬ್‌ನಲ್ಲಿ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಪಂಜಾಬ್‌ನ ಸಾರ್ವಜನಿಕ ತಾಣಗಳಲ್ಲಿ ಜನರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರಲಿದೆ. ಕೋವಿಡ್ ಸೋಂಕು ಕಡಿಮೆಯಾಗಿದ್ದ ಸಂದರ್ಭದಲ್ಲಿ ಮಾಸ್ಕ್ ಧರಿಸುವ ಕಡ್ಡಾಯ ನಿಯಮವನ್ನು ಸಡಿಲಿಸಲಾಗಿತ್ತು.

ಆದರೆ, ದೈನಂದಿನ ಕೋವಿಡ್ ಪ್ರಕರಣ ಏರಿಕೆ ಬೆನ್ನಲ್ಲೇ ಪಂಜಾಬ್ ಸರ್ಕಾರ ಗುರುವಾರ ಹೊಸ ಸೂಚನೆ ಹೊರಡಿಸಿದೆ.

ADVERTISEMENT

ಸಾರ್ವಜನಿಕ ಸಾರಿಗೆ, ಶಾಪಿಂಗ್ ಮಾಲ್, ಸಿನಿಮಾ ಥಿಯೇಟರ್, ಶಾಲೆ–ಕಾಲೇಜು, ಸ್ಟೋರ್‌ಗಳಲ್ಲಿ ಜನರು ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಸರ್ಕಾರ ಹೇಳಿದೆ.

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕೋವಿಡ್ ಪ್ರಕರಣ ಹೆಚ್ಚಾಗಿದ್ದ ಬೆನ್ನಲ್ಲೇ, ಸರ್ಕಾರ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿ ಆದೇಶ ಹೊರಡಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.