ಚಂಡೀಗಡ: ಪಂಜಾಬ್ ರಾಜ್ಯದ ಕಾಂಗ್ರೆಸ್ ಘಟಕದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನವಜೋತ್ ಸಿಂಗ್ ಸಿಧು ಅವರ ಜೊತೆಗೆ ಒಗ್ಗಟ್ಟು ಪ್ರದರ್ಶಿಸಿರುವ ಪಂಜಾಬ್ ಸಚಿವೆ ರಜಿಯಾ ಸುಲ್ತಾನಾ ಸಹ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ಧಾರೆ.
ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿಗೆ ಸಲ್ಲಿಸಿರುವ ರಾಜೀನಾಮೆ ಪತ್ರದಲ್ಲಿ ಸುಲ್ತಾನಾ, ನವಜೋತ್ ಸಿಂಗ್ ಸಿಧು ಅವರ ಜೊತೆಗೆ ಒಗ್ಗಟ್ಟು ಪ್ರದರ್ಶಿಸಲು ರಾಜೀನಾಮೆ ನೀಡುತ್ತಿರುವುದಾಗಿ ಹೇಳಿದ್ದಾರೆ.
ಸುಲ್ತಾನಾ ಅವರು, ಸಿಧು ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದಾರೆ. ಅವರ ಪತಿ, ಮಾಜಿ ಐಪಿಎಸ್ ಅಧಿಕಾರಿ, ಮೊಹಮ್ಮದ್ ಮುಸ್ತಫಾ, ಸಿದ್ದು ಅವರ ಪ್ರಮುಖ ಕಾರ್ಯತಂತ್ರದ ಸಲಹೆಗಾರರಾಗಿದ್ದಾರೆ.
ಇಂದು ಬೆಳಿಗ್ಗೆಯಷ್ಟೇ, ಸುಲ್ತಾನಾ ಅವರಿಗೆ ನೀರು ಸರಬರಾಜು ಮತ್ತು ನೈರ್ಮಲ್ಯ, ಸಾಮಾಜಿಕ ಭದ್ರತೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಮುದ್ರಣ ಮತ್ತು ಲೇಖನ ಇಲಾಖೆಗಳ ಜವಾಬ್ದಾರಿ ನೀಡಲಾಗಿತ್ತು.
ಅಮರಿಂದರ್ ಸಿಂಗ್ ನೇತೃತ್ವದ ಸರ್ಕಾರದಲ್ಲಿ ಅವರು ಸಾರಿಗೆ ಸಚಿವರಾಗಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.