ADVERTISEMENT

ಮೋದಿ ಕಾದಿದ್ದು 15 ನಿಮಿಷ, ರೈತರು ಒಂದೂವರೆ ವರ್ಷ ಕಾದಿದ್ದರು: ಸಿಧು ವ್ಯಂಗ್ಯ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 7 ಜನವರಿ 2022, 7:12 IST
Last Updated 7 ಜನವರಿ 2022, 7:12 IST
   

ನವದೆಹಲಿ: ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಪ್ರಧಾನಿ ನರೇಂದ್ರ ಮೋದಿಯವರ ಭದ್ರತಾ ಲೋಪದ ಕುರಿತು ವ್ಯಂಗ್ಯವಾಡಿದ್ದಾರೆ.

ಕೃಷಿ ಕಾನೂನುಗಳನ್ನು ರದ್ದುಪಡಿಸಲು ಒತ್ತಾಯಿಸಿ ರೈತರು ಒಂದು ವರ್ಷಕ್ಕೂ ಹೆಚ್ಚು ಕಾಲ ಕಾಯಬೇಕಾಯಿತು. ಕೇವಲ 15 ನಿಮಿಷ ಕಾದಿದ್ದಕ್ಕೆ ಪ್ರಧಾನಿಗೆ ‘ತೊಂದರೆ’ ಆಗಿದೆ ಎಂದು ಟೀಕಿಸಿದ್ದಾರೆ. ಸಿಧು ಹೇಳಿಕೆ ಕುರಿತು ಸುದ್ದಿಸಂಸ್ಥೆ ‘ಪಿಟಿಐ’ ವರದಿ ಮಾಡಿದೆ.

‘ನಾನು ಪ್ರಧಾನಿಯವರನ್ನು ಕೇಳಲು ಬಯಸುತ್ತೇನೆ. ನಮ್ಮ ರೈತ ಸಹೋದರರು ದೆಹಲಿಯ ಗಡಿಯಲ್ಲಿ ಒಂದು ವರ್ಷಕ್ಕೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದರು. ಅವರು ಒಂದೂವರೆ ವರ್ಷ ಅಲ್ಲಿಯೇ ಇದ್ದರು. ಈ ಬಗ್ಗೆ ನಿಮ್ಮ ಮಾಧ್ಯಮಗಳು ಏನನ್ನೂ ಹೇಳಲಿಲ್ಲವೇಕೆ’ ಎಂದು ಸಿಧು ಪ್ರಶ್ನಿಸಿದ್ದಾರೆ.

ADVERTISEMENT

ಪಂಜಾಬ್‌ನ ಫಿರೋಜ್‌ಪುರದಲ್ಲಿ ಪ್ರಮುಖ ಭದ್ರತಾ ಲೋಪವಾಗಿತ್ತು. ಆ ಕಾರಣ ಮೋದಿ ಹಾಗೂ ಅವರ ಬೆಂಗಾವಲು ಪಡೆ ಫ್ಲೈಓವರ್‌ನಲ್ಲಿ ಸಿಲುಕಿಕೊಂಡಿತ್ತು. ಬಳಿಕ, ರ್‍ಯಾಲಿ ಸೇರಿದಂತೆ ಯಾವುದೇ ಕಾರ್ಯಕ್ರಮಕ್ಕೆ ಹಾಜರಾಗದೆ ಪ್ರಧಾನಿ ಪಂಜಾಬ್‌ನಿಂದ ಮರಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.