ADVERTISEMENT

ಭಿಕ್ಷಾಟನೆ ಮಾಡುತ್ತಿರುವ ಮಕ್ಕಳ ಡಿಎನ್‌ಎ ಪರೀಕ್ಷೆಗೆ ಮುಂದಾದ ಪಂಜಾಬ್ ಸರ್ಕಾರ!

ಪಿಟಿಐ
Published 17 ಜುಲೈ 2025, 10:34 IST
Last Updated 17 ಜುಲೈ 2025, 10:34 IST
<div class="paragraphs"><p>ಎಐ ಚಿತ್ರ</p></div>

ಎಐ ಚಿತ್ರ

   

ಚಂಡೀಗಢ: ವಯಸ್ಕರೊಂದಿಗೆ ಭಿಕ್ಷಾಟನೆ ಮಾಡುತ್ತಿರುವ ಮಕ್ಕಳ ಡಿಎನ್‌ಎ ಪರೀಕ್ಷೆ ನಡೆಸುವಂತೆ ಪಂಜಾಬ್ ಸರ್ಕಾರ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ. ಆ ಮೂಲಕ ಮಕ್ಕಳ ಕಳ್ಳಸಾಗಣೆ ಮತ್ತು ಶೋಷಣೆ ವಿರುದ್ಧ ಕಠಿಣ ಕ್ರಮಕೈಗೊಳ್ಳಲು ಮುಂದಾಗಿದೆ.

ಜೀವನ್‌ಜ್ಯೋತಿ–2 ಯೋಜನೆಯಡಿ ಸಾಮಾಜಿಕ ಭದ್ರತಾ ನಿರ್ದೇಶನಾಲಯ(ಮಹಿಳೆ ಮತ್ತು ಮಕ್ಕಳ ಅಭಿವೃದ್ಧಿ) ಎಲ್ಲಾ ಜಿಲ್ಲಾಧಿಕಾರಿಗಳಿಗೆ ಈ ಸೂಚನೆ ನೀಡಿದೆ.

ADVERTISEMENT

ಡಿಎನ್‌ಎ ಪರೀಕ್ಷೆಯು ಮಕ್ಕಳು ಮತ್ತು ಅವರೊಂದಿಗೆ ಭಿಕ್ಷೆ ಬೇಡುತ್ತಿರುವ ವ್ಯಕ್ತಿಗಳ ನಡುವಿನ ಸಂಬಂಧವನ್ನು ಪತ್ತೆ ಮಾಡುವ ಉದ್ದೇಶವನ್ನು ಹೊಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಒಂದು ವೇಳೆ ಡಿಎನ್‌ಎ ಪರೀಕ್ಷೆಯಲ್ಲಿ ಭಿಕ್ಷಾಟನೆ ಮಾಡುತ್ತಿರುವ ಮಗು ಮತ್ತು ಮಗುವಿನ ಜೊತೆಯಿರುವ ವ್ಯಕ್ತಿಯ ನಡುವೆ ಯಾವುದೇ ಸಂಬಂಧವಿಲ್ಲ ಎಂದು ಕಂಡುಬಂದರೆ ಅಂತವರಿಗೆ ಕಠಿಣ ಶಿಕ್ಷೆ ನೀಡಲಾಗುವುದು ಎಂದೂ ಎಚ್ಚರಿಸಿದ್ದಾರೆ.

ಮಕ್ಕಳ ರಕ್ಷಣೆಗೆ ಸರ್ಕಾರ ಬದ್ಧವಾಗಿದ್ದು, ಮಕ್ಕಳ ಭಿಕ್ಷಾಟನೆ ತೊಡೆದುಹಾಕಲು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.