ಸಾಂದರ್ಭಿಕ ಚಿತ್ರ
ಚಂಡೀಗಢ: ಪಂಜಾಬ್‌ನ ಬಟಿಂಡಾ ಜಿಲ್ಲೆಯಲ್ಲಿ 17.70 ಗ್ರಾಂ ಹೆರಾಯಿನ್ ಸಾಗಿಸುತ್ತಿದ್ದ ಮಹಿಳಾ ಪೊಲೀಸ್ ಕಾನ್‌ಸ್ಟೆಬಲ್‌ರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಮಾದಕ ದ್ರವ್ಯ ನಿಗ್ರಹ ಕಾರ್ಯಾಚರಣೆ ನಡೆಸಿದ ಪೊಲೀಸರು, ಬುಧವಾರ ಸಂಜೆ ಬಟಿಂಡಾದ ಬಾದಲ್ ಮೇಲ್ಸೇತುವೆ ಬಳಿ ಕಾನ್‌ಸ್ಟೆಬಲ್ ಅಮನ್‌ದೀಪ್ ಕೌರ್ ಅವರ ವಾಹನವನ್ನು ತಡೆದು ಶೋಧ ನಡೆಸಿದರು. ಈ ವೇಳೆ 17.70 ಗ್ರಾಂ ಹೆರಾಯಿನ್ ಪತ್ತೆಯಾಗಿದೆ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ಹರ್ಬನ್ಸ್ ಸಿಂಗ್ ಹೇಳಿದ್ದಾರೆ.
ಕಾನ್‌ಸ್ಟೆಬಲ್ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಈ ಕುರಿತು ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.