ADVERTISEMENT

ಕೇಜ್ರಿವಾಲ್ ವಿರುದ್ಧ ಪ್ರಚೋದನಕಾರಿ ಹೇಳಿಕೆ: ಕುಮಾರ್ ವಿಶ್ವಾಸ್ ವಿರುದ್ಧ ದೂರು

ಪಿಟಿಐ
Published 20 ಏಪ್ರಿಲ್ 2022, 12:41 IST
Last Updated 20 ಏಪ್ರಿಲ್ 2022, 12:41 IST
ಕಾರ್ಯಕ್ರಮವೊಂದರಲ್ಲಿ ಅರವಿಂದ ಕೇಜ್ರಿವಾಲ್ ಜೊತೆ ಕುಮಾರ್ ವಿಶ್ವಾಸ್ –ಪಿಟಿಐ ಚಿತ್ರ
ಕಾರ್ಯಕ್ರಮವೊಂದರಲ್ಲಿ ಅರವಿಂದ ಕೇಜ್ರಿವಾಲ್ ಜೊತೆ ಕುಮಾರ್ ವಿಶ್ವಾಸ್ –ಪಿಟಿಐ ಚಿತ್ರ   

ಚಂಡೀಗಡ: ಪಂಜಾಬ್ ವಿಧಾನಸಭಾ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ ಕೇಜ್ರಿವಾಲ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದ ಪಕ್ಷದ ಮಾಜಿ ನಾಯಕ ಕುಮಾರ್ ವಿಶ್ವಾಸ್ ಅವರ ನಿವಾಸಕ್ಕೆ ಭೇಟಿ ನೀಡಿ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

ಗಾಜಿಯಾಬಾದ್‌ನಲ್ಲಿ ಇರುವ ತಮ್ಮ ಮನೆಗೆ ಪೊಲೀಸರ ತಂಡ ಭೇಟಿ ನೀಡಿರುವ ಕುರಿತು ಕುಮಾರ್ ವಿಶ್ವಾಸ್ ಬುಧವಾರ ಟ್ವೀಟ್ ಮಾಡಿದ್ದಾರೆ. ಏಪ್ರಿಲ್ 12ರಂದು ರೂಪನಗರ ಪಟ್ಟಣದ ಸದರ್ ಪೊಲೀಸ್ ಠಾಣೆಯಲ್ಲಿ ವಿಶ್ವಾಸ್ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

‘ಕೇಜ್ರಿವಾಲ್ ಪ್ರತ್ಯೇಕತಾವಾದಿಗಳನ್ನು ಬೆಂಬಲಿಸುತ್ತಿದ್ದಾರೆ’ ಎಂದು ಕುಮಾರ್ ವಿಶ್ವಾಸ್ ಚುನಾವಣೆಗೂ ಮುನ್ನ ಆರೋಪ ಮಾಡಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.