ADVERTISEMENT

ಪಂಜಾಬ್ ಚುನಾವಣೆ: ಜನರ ಕಲ್ಯಾಣಕ್ಕಾಗಿ ಎಲ್ಲ ಪ್ರಯತ್ನ ಮಾಡಿದ್ದೇವೆ – ಸಿಎಂ ಚನ್ನಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಫೆಬ್ರುವರಿ 2022, 2:48 IST
Last Updated 20 ಫೆಬ್ರುವರಿ 2022, 2:48 IST
ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ
ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ   

ಖರರ್ (ಪಂಜಾಬ್): ಪಂಜಾಬ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರುಇಲ್ಲಿನ ಶ್ರೀ ಕಟಲ್‌ಗಡ ಸಾಹಿಬ್‌ ಗುರುದ್ವಾರಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಇದೇ ವೇಳೆ ಅವರು, ತಮ್ಮ ಸರ್ಕಾರವು ಅತ್ಯಂತ ಸಣ್ಣ ಅವಧಿಯಲ್ಲಿ, ಜನರ ಕಲ್ಯಾಣಕ್ಕಾಗಿ ಹೆಚ್ಚಿನ ಕೆಲಸಗಳನ್ನು ಮಾಡಿದೆ ಎಂದು ಹೇಳಿಕೊಂಡಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಪಂಜಾಬ್ ಹಾಗೂ ಎಲ್ಲರಿಗೂ ಒಳಿತಾಗಲೆಂದು ಪ್ರಾರ್ಥಿಸಲು ನಾನು ಇಲ್ಲಿಗೆ ಬಂದಿದ್ದೇನೆ. ಪ್ರಚಾರದ ಸಂದರ್ಭದಲ್ಲಿ ಪಕ್ಷದ ನಾಯಕತ್ವ ನನ್ನದಾಗಿತ್ತು. ಈಗ ಅದು ಜನರ ಇಚ್ಛೆಯಾಗಿದೆ. ನಾವು ನಮ್ಮಿಂದ ಸಾಧ್ಯವಾದ ಪ್ರಯತ್ನ ಮಾಡಿದ್ದೇವೆ' ಎಂದು ಹೇಳಿದ್ದಾರೆ.

ಚನ್ನಿ ಅವರು ಚಮ್‌ಕೌರ್‌ ಸಾಹಿಬ್‌ ಹಾಗೂ ಭದೌರ್‌ ವಿಧಾನಸಭೆ ಕ್ಷೇತ್ರಗಳ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.

ADVERTISEMENT

117ಸದಸ್ಯ ಬಲದಪಂಜಾಬ್ ವಿಧಾನಸಭೆಗೆ ಇಂದು (ಫೆ.20)ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ.2.14 ಕೋಟಿ ಮತದಾರು, ಕಣದಲ್ಲಿರುವ1,304 ಅಭ್ಯರ್ಥಿಗಳ ಭವಿಷ್ಯವನ್ನು ಬರೆಯಲಿದ್ದಾರೆ. ಮಾರ್ಚ್ 10ರಂದು ಫಲಿತಾಂಶ ಪ್ರಕಟವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.