
ಪ್ರಜಾವಾಣಿ ವಾರ್ತೆ
ದೆಹಲಿ: ಕೊರೊನಾ ವೈರಸ್‌ಗೆ ದೇಶದಲ್ಲಿ ಮತ್ತೊಂದು ಬಲಿ ಸಂಭವಿಸಿದೆ. ಸೋಂಕುಗೊಂಡಿದ್ದ ಪಂಜಾಬ್‌ನ ವ್ಯಕ್ತಿ ಗುರುವಾರ ಮೃತಪಟ್ಟಿದ್ದಾರೆ.
ಮಾರ್ಚ್ 7ರಂದು ಜರ್ಮನಿಯಿಂದ ಇಟಲಿ ಮಾರ್ಗವಾಗಿ ಭಾರತಕ್ಕೆ ಬಂದಿದ್ದ 70 ವರ್ಷ ವಯಸ್ಸಿನ ವ್ಯಕ್ತಿ ಗುರುವಾರ ಮೃತಪಟ್ಟಿದ್ದಾರೆ.ಕೊರೊನಾ ವೈರಸ್‌ನಿಂದಾಗಿ ಪಂಜಾಬ್‌ನಲ್ಲಿ ಸಂಭವಿಸಿದ ಮೊದಲ ಸಾವಿನ ಪ್ರಕರಣವಿದು.
ಇದರೊಂದಿಗೆ ದೇಶದಲ್ಲಿ ಕೊರೊನಾ ವೈರಸ್‌ನಿಂದ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ. ಸದ್ಯ ದೇಶದಲ್ಲಿ 167 ಮಂದಿಗೆ ಕೊರೊನಾ ವೈರಸ್ ಸೋಂಕು ದೃಢವಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.