ಪಂಜಾಬ್: ಸೇತುವೆಯಿಂದ ಉರುಳಿದ ಬಸ್
ಬಟಿಂಡಾ: ಪಂಜಾಬ್‌ನ ಬಟಿಂಡಾದಲ್ಲಿ ಸೇತುವೆ ಮೇಲಿಂದ ಬಸ್ ಉರುಳಿ ಬಿದ್ದು, ಎಂಟು ಪ್ರಯಾಣಿಕರು ಶುಕ್ರವಾರ ಮೃತಪಟ್ಟಿದ್ದಾರೆ.
45ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಖಾಸಗಿ ಬಸ್ ತಲವಂಡಿ ಸಾಬೊ ಮಾರ್ಗವಾಗಿ ಬಟಿಂಡಾ ಕಡೆಗೆ ಸಂಚರಿಸುತ್ತಿದ್ದಾಗ ಈ ಅವಘಡ ಸಂಭವಿಸಿದೆ.
ಪೊಲೀಸರು ಮತ್ತು ಜಿಲ್ಲಾಡಳಿತದ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡವು ಸಹ ನೆರವು ನೀಡಲು ಸ್ಥಳಕ್ಕೆ ದೌಡಾಯಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿದೆ. ಪ್ರತಿಕೂಲ ಹವಾಮಾನವು ಅವಘಡಕ್ಕೆ ಕಾರಣವಾಗಿರಬಹುದು ಎಂದು ಅಂದಾಜಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.