ADVERTISEMENT

ಸಿಧು ಮೂಸೆವಾಲಾ ಹತ್ಯೆ ಪ್ರಕರಣ: ಎನ್‌ಕೌಂಟರ್‌ನಲ್ಲಿ ಇಬ್ಬರ ಹತ್ಯೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 20 ಜುಲೈ 2022, 12:45 IST
Last Updated 20 ಜುಲೈ 2022, 12:45 IST
ಪಿಟಿಐ ಚಿತ್ರ
ಪಿಟಿಐ ಚಿತ್ರ   

ಅಮೃತಸರ: ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದ ಇಬ್ಬರು ಶಂಕಿತ ಆರೋಪಿಗಳನ್ನು ಪಂಜಾಬ್‌ನ ಅಮೃತಸರ ಜಿಲ್ಲೆಯ ಚೀಚಾ ಭಕ್ನಾ ಗ್ರಾಮದಲ್ಲಿ ನಡೆದ ಪೊಲೀಸ್ ಎನ್‌ಕೌಂಟರ್‌ನಲ್ಲಿ ಹತ್ಯೆಗೈಯಲಾಗಿದೆ.

ಗ್ಯಾಂಗ್‌ಸ್ಟರ್ ಅವರನ್ನು ಜಗರೂಪ್ ಸಿಂಗ್ ರೂಪಾ ಹಾಗೂಮನ್‌ಪ್ರೀತ್ ಸಿಂಗ್ ಅಲಿಯಾಸ್ ಮನ್ನು ಕುಸಾ ಎಂದು ಗುರುತಿಸಲಾಗಿದೆ.

ಸುಮಾರು ನಾಲ್ಕು ತಾಸು ನಡೆದ ಎನ್‌ಕೌಂಟರ್‌ನಲ್ಲಿ ಆರೋಪಿಗಳನ್ನು ಗುಂಡಿಕ್ಕಿ ಹತ್ಯೆಗೈಯಲಾಗಿದೆ.

ಗುಂಡಿನ ಚಕಮಕಿಯಲ್ಲಿ ಮೂವರು ಪೊಲೀಸರು ಗಾಯಗೊಂಡಿದ್ದಾರೆ.

ಇವರಿಬ್ಬರು ಮೂಸೆವಾಲಾ ಹತ್ಯೆಯಲ್ಲಿ ಭಾಗಿಯಾಗಿದ್ದರು ಎಂದು ಶಂಕಿಸಲಾಗಿದ್ದು, ತಲೆಮರೆಸಿಕೊಂಡಿದ್ದರು. ಪಂಜಾಬ್‌ ಗ್ಯಾಂಗ್‌ಸ್ಟರ್ ನಿಗ್ರಹ ಪಡೆ, ಆರೋಪಿಗಳ ಹುಡುಕಾಟದ ನಡುವೆ ಎನ್‌ಕೌಂಟರ್ ನಡೆದಿದೆ.

ಮೇ 19ರಂದು ಪಂಜಾಬ್‌ನ ಮಾನ್ಸಾ ಜಿಲ್ಲೆಯಲ್ಲಿ ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.