ನವದೆಹಲಿ: ಪಂಜಾಬಿ ಗಾಯಕ ಸಿಧು ಮೂಸೆವಾಲಾ ಹತ್ಯೆ ಪ್ರಕರಣದಲ್ಲಿ ಭಯೋತ್ಪಾದಕ ಗ್ಯಾಂಗ್ ಕೈವಾಡದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ), ದೆಹಲಿ, ದೆಹಲಿ-ಎನ್‌ಸಿಆರ್, ಹರಿಯಾಣ ಮತ್ತು ಪಂಜಾಬ್‌ನ ಅನೇಕ ಸ್ಥಳಗಳಲ್ಲಿ ಸೋಮವಾರಶೋಧ ಕಾರ್ಯಾಚರಣೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.
ಈ ಕುರಿತು ಸುದ್ದಿ ಸಂಸ್ಥೆ 'ಎಎನ್‌ಐ' ಟ್ವೀಟ್ ಮಾಡಿದ್ದು, ಸ್ಥಳೀಯ ಪೊಲೀಸ್ ಪಡೆ ಸಹಾಯದೊಂದಿಗೆ ಎನ್‌ಐಎ ಏಕಕಾಲದಲ್ಲಿ ವಿವಿಧೆಡೆ ದಾಳಿ ನಡೆಸಿದೆ ಎಂದು ವರದಿ ಮಾಡಿದೆ.
ಇದನ್ನೂ ಓದಿ:ಜ್ಞಾನವಾಪಿ ಮಸೀದಿ ತೀರ್ಪು ಸೆ.12ಕ್ಕೆ ಪ್ರಕಟಗೊಳ್ಳುವ ನಿರೀಕ್ಷೆ
ಸಿಧು ಮೂಸೆವಾಲಾ ಹತ್ಯೆಗೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಭಯೋತ್ಪಾದಕ ನಂಟಿಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲಾಗಿತ್ತು.
ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಸಿಧು ಮೂಸೆವಾಲಾ ಹತ್ಯೆಯ ಪ್ರಮುಖ ಸಂಚುಕೋರನಾಗಿದ್ದು, ಸದ್ಯ ಜೈಲು ಪಾಲಾಗಿದ್ದಾನೆ. ಬಿಷ್ಣೋಯಿ ಸಹಚರ ಕೆನಡಾ ಮೂಲದ ಗ್ಯಾಂಗ್‌ಸ್ಟರ್ ಗೋಲ್ಡಿ ಬ್ರಾರ್ ಪಾತ್ರವನ್ನು ಎನ್‌ಐಎ ತನಿಖೆ ನಡೆಸುತ್ತಿದೆ.
ಮೇ 29ರಂದು ಸಿಧು ಮೂಸೆವಾಲಾ ಅವರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆಗೈದಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.