ADVERTISEMENT

Puri Temple Stampede: ಜಿಲ್ಲಾಧಿಕಾರಿ, SP ವರ್ಗಾವಣೆ, ಇಬ್ಬರು ಪೊಲೀಸರ ಅಮಾನತು

ಪಿಟಿಐ
Published 29 ಜೂನ್ 2025, 10:49 IST
Last Updated 29 ಜೂನ್ 2025, 10:49 IST
   

ಭುವನೇಶ್ವರ: ಪುರಿ ಜಗನ್ನಾಥ ದೇಗುಲದ ಬಳಿ ಇಂದು ಸಂಭವಿಸಿದ ಕಾಲ್ತುಳಿತದಲ್ಲಿ ಮೂವರು ಮೃತಪಟ್ಟು, ಸುಮಾರು 50 ಜನರು ಗಾಯಗೊಂಡಿದ್ದಾರೆ. ಘಟನೆ ಬೆನ್ನಲ್ಲೇ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಮತ್ತು ಎಸ್‌ಪಿ ವಿನೀತ್ ಅಗರ್ವಾಲ್ ಅವರನ್ನು ವರ್ಗಾವಣೆ ಮಾಡಿ ಮುಖ್ಯಮಂತ್ರಿ ಮೋಹನ್ ಮಾಝಿ ಆದೇಶಿಸಿದ್ದಾರೆ.

ನಿರ್ಲಕ್ಷ್ಯದಿಂದ ಕಾಲ್ತುಳಿತ ಸಂಭವಿಸಿದ್ದು, ಇದು ಅಕ್ಷಮ್ಯ ಎಂದು ಮಾಝಿ ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸಿಪಿ ವಿಷ್ಣು ಪಾಟಿ ಮತ್ತು ಕಮಾಂಡೆಂಟ್ ಅಜಯ್ ಪಧಿ ಎಂಬ ಇಬ್ಬರು ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿರುವುದಾಗಿ ಸಿಎಂ ಅಧಿಕೃತ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಖುರ್ದಾ ಜಿಲ್ಲಾಧಿಕಾರಿ ಚಂಚಲ್ ರಾಣಾ ಅವರನ್ನು ಪುರಿಯ ನೂತನ ಜಿಲ್ಲಾಧಿಕಾರಿಯಾಗಿ ಸಿಎಂ ನೇಮಿಸಿದ್ದಾರೆ . ಅಗರ್ವಾಲ್ ಅವರ ಬದಲಿಗೆ ಪಿನಕ್ ಮಿಶ್ರಾ ಅವರನ್ನು ಪುರಿ ಎಸ್‌ಪಿಯಾಗಿ ನೇಮಿಸಲಾಗಿದೆ.

ADVERTISEMENT

ಮೃತರ ಸಂಬಂಧಿಕರಿಗೆ ಸರ್ಕಾರ ತಲಾ ₹25 ಲಕ್ಷ ಆರ್ಥಿಕ ನೆರವು ನೀಡಲಿದೆ ಎಂದೂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಗುಂಡಿಚಾ ದೇವಸ್ಥಾನದ ಬಳಿ ಬೆಳಿಗಿನ ಜಾವ 4 ಗಂಟೆ ಸುಮಾರಿಗೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಕನಿಷ್ಠ ಮೂವರು ಮೃತಪಟ್ಟು, ಸುಮಾರು 50 ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.