ADVERTISEMENT

ಉತ್ತರಾಖಂಡ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಮುಂದುವರಿಕೆ

ಪಿಟಿಐ
Published 21 ಮಾರ್ಚ್ 2022, 13:46 IST
Last Updated 21 ಮಾರ್ಚ್ 2022, 13:46 IST
ರಾಜನಾಥ್ ಸಿಂಗ್ ಅವರಿಗೆ ಸ್ವಾಗತ ಕೋರಿದ ಪುಷ್ಕರ್ ಸಿಂಗ್ ಧಾಮಿ
ರಾಜನಾಥ್ ಸಿಂಗ್ ಅವರಿಗೆ ಸ್ವಾಗತ ಕೋರಿದ ಪುಷ್ಕರ್ ಸಿಂಗ್ ಧಾಮಿ   

ಡೆಹ್ರಾಡೂನ್: ಉತ್ತರಾಖಂಡದ ಮುಖ್ಯಮಂತ್ರಿಯಾಗಿ ಪುಷ್ಕರ್ ಸಿಂಗ್ ಧಾಮಿ ಮುಂದುವರಿಯಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಮವಾರ ಘೋಷಿಸಿದೆ.

ಸೋಮವಾರ ಸಂಜೆ ನಡೆದ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ಹೊಸ ಮುಖ್ಯಮಂತ್ರಿಯನ್ನು ಆಯ್ಕೆ ಮಾಡಲಾಗಿದೆ.

ಬಿಜೆಪಿ ಕೇಂದ್ರ ವೀಕ್ಷಕ ರಾಜನಾಥ್ ಸಿಂಗ್, ನಾಯಕಿ ಮೀನಾಕ್ಷಿ ಲೇಖಿ ಹಾಗೂ ರಾಜ್ಯದ ಉಸ್ತುವಾರಿ ಪ್ರಲ್ಹಾದ ಜೋಶಿ ಸಭೆಯಲ್ಲಿ ಭಾಗವಹಿಸಿದ್ದರು.

ADVERTISEMENT

ವಿಧಾನಸಭೆ ಚುನಾವಣೆಯಲ್ಲಿ ಪುಷ್ಕರ್ ಸಿಂಗ್ ಧಾಮಿ ಸೋಲು ಅನುಭವಿಸಿರುವುದು ಮುಖ್ಯಮಂತ್ರಿ ಆಯ್ಕೆಯನ್ನು ಕಠಿಣಗೊಳಿಸಿತ್ತು.

70 ಸದಸ್ಯ ಬಲದ ಉತ್ತರಾಖಂಡ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 47 ಸ್ಥಾನಗಳಲ್ಲಿ ಜಯಿಸಿ ಅಧಿಕಾರ ಉಳಿಸಿಕೊಂಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.