ADVERTISEMENT

ನೋಟುಗಳಲ್ಲಿ ಲಕ್ಷ್ಮಿ, ಗಣೇಶನ ಭಾವಚಿತ್ರ ಮುದ್ರಿಸಿ: ಮೋದಿಗೆ ಕೇಜ್ರಿವಾಲ್ ಮನವಿ 

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 26 ಅಕ್ಟೋಬರ್ 2022, 8:11 IST
Last Updated 26 ಅಕ್ಟೋಬರ್ 2022, 8:11 IST
 ಅರವಿಂದ ಕೇಜ್ರಿವಾಲ್
ಅರವಿಂದ ಕೇಜ್ರಿವಾಲ್   

ನವದೆಹಲಿ: ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಕರೆನ್ಸಿ ನೋಟುಗಳಲ್ಲಿ ಲಕ್ಷ್ಮಿದೇವಿ ಮತ್ತು ಗಣೇಶನ ಭಾವಚಿತ್ರಗಳನ್ನು ಮುದ್ರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದಕೇಜ್ರಿವಾಲ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕರೆನ್ಸಿ ನೋಟುಗಳ ಮೇಲೆ ಮಹಾತ್ಮ ಗಾಂಧೀಜಿ ಭಾವಚಿತ್ರದ ಜತೆಗೆ ಲಕ್ಷ್ಮಿದೇವಿ, ಗಣೇಶನ ಫೋಟೊಗಳನ್ನು ಹಾಕಬೇಕೆಂಬುದು ನನ್ನ ಬಯಕೆ. ಈ ಕುರಿತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ದೇಶದಲ್ಲಿ ರೂಪಾಯಿ ಮೌಲ್ಯ ನಿರಂತರವಾಗಿ ಕುಸಿಯುತ್ತಿರುವುದರಿಂದ ಭಾರತದ ಆರ್ಥಿಕತೆಯು ಬಿಕ್ಕಟ್ಟಿನಲ್ಲಿದೆ ಎಂದು ಹೇಳಿದ ಕೇಜ್ರಿವಾಲ್, ‘ಆರ್ಥಿಕತೆ ಸುಧಾರಿಸಲು ಹಲವಾರು ಹಂತಗಳಿವೆ, ಇದರಲ್ಲಿ ಹೆಚ್ಚಿನ ಶಾಲೆಗಳು, ಆಸ್ಪತ್ರೆಗಳನ್ನು ನಿರ್ಮಿಸುವುದು ಮತ್ತು ದೇಶದಲ್ಲಿ ಮೂಲಸೌಕರ್ಯವನ್ನು ಸುಧಾರಿಸುವುದು ಸೇರಿವೆ’ ಎಂದು ಹೇಳಿದ್ದಾರೆ.

ADVERTISEMENT

‘ದೇಶದ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಕಷ್ಟು ಪ್ರಯತ್ನಗಳನ್ನು ಪಡಬೇಕಿದೆ. ನಾವು ಎಷ್ಟೇ ಪ್ರಯತ್ನಪಟ್ಟರೂ ಕೆಲವೊಮ್ಮೆ ಉತ್ತಮ ಫಲಿತಾಂಶ ದೊರೆಯದೇ ಇರುವುದರಿಂದ ದೇವರ ಆಶೀರ್ವಾದ ಬೇಕಿರುತ್ತದೆ. ಅದಕ್ಕಾಗಿ ನೋಟುಗಳಲ್ಲಿ ಲಕ್ಷ್ಮಿ ಮತ್ತು ಗಣೇಶ ದೇವರ ಭಾವಚಿತ್ರಗಳಿದ್ದರೆ ಇಡೀ ದೇಶಕ್ಕೆ ಆಶೀರ್ವಾದ ಸಿಗುತ್ತದೆ’ ಎಂದು ಕೇಜ್ರಿವಾಲ್ ಸಲಹೆ ನೀಡಿದ್ದಾರೆ.

ಇಂಡೋನೇಷ್ಯಾದಲ್ಲಿ ಕರೆನ್ಸಿ ನೋಟಿನ ಮೇಲೆ ಗಣೇಶ ಭಾವಚಿತ್ರನ್ನು ಮುದ್ರಿಸಲಾಗಿದೆ ಎಂದು ಕೇಜ್ರಿವಾಲ್ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.