
ಶಶಿ ತರೂರ್, ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ
ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಏರ್ಪಡಿಸಿದ ಔತಣಕೂಟಕ್ಕೆ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರಿಗೆ ಆಹ್ವಾನ ನೀಡಿಲ್ಲ ಎಂದು ಕಾಂಗ್ರೆಸ್ ಇಂದು (ಶುಕ್ರವಾರ) ದೂರಿದೆ.
ಏತನ್ಮಧ್ಯೆ ಔತಣಕೂಟದ ಆಹ್ವಾನವನ್ನು ಸ್ವೀಕರಿಸಿದ ಕಾಂಗ್ರೆಸ್ ಸಂಸದ ಶಿಶಿ ತರೂರ್ ಅವರನ್ನು ಕಾಂಗ್ರೆಸ್ ಟೀಕಿಸಿದೆ.
ಈ ಕುರಿತು ಕಾಂಗ್ರೆಸ್ ಪ್ರಧಾನಿ ಕಾರ್ಯದರ್ಶಿ (ಸಂವಹನ) ಜೈರಾಮ್ ರಮೇಶ್ ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಪೋಸ್ಟ್ ಮಾಡಿದ್ದಾರೆ. 'ಪುಟಿನ್ ಔತಣಕೂಟಕ್ಕೆ ಲೋಕಸಭೆ ಹಾಗೂ ರಾಜ್ಯಸಭೆ ವಿರೋಧ ಪಕ್ಷದ ನಾಯಕರಿಗೆ ಆಹ್ವಾನ ನೀಡಿಲ್ಲ' ಎಂದು ಅವರು ಹೇಳಿದ್ದಾರೆ.
ಮತ್ತೊಂದೆಡೆ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕ ಪವನ್ ಖೇರಾ, 'ಸರ್ಕಾರವು ಪ್ರತಿದಿನ ಶಿಷ್ಟಾಚಾರವನ್ನು ಉಲ್ಲಂಘಿಸುತ್ತಿದ್ದು, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಲ್ಲ' ಎಂದು ಆರೋಪಿಸಿದ್ದಾರೆ.
ಶಶಿ ತರೂರ್, ಆಹ್ವಾನವನ್ನು ಸ್ವೀಕರಿಸಿದ ಬಗ್ಗೆ ಕೇಳಿದಾಗ, 'ಅವರನ್ನೇಕೇಳಿ. ನಮ್ಮ ನಾಯಕರನ್ನು ಆಹ್ವಾನಿಸದೇ ನಮಗೆ ಮಾತ್ರ ಆಹ್ವಾನ ಬಂದಿದ್ದರೆ ನಮ್ಮ ಆತ್ಮಸಾಕ್ಷಿಯನ್ನೇ ನಾವೇ ಪ್ರಶ್ನಿಸಿಕೊಳ್ಳಬೇಕು. ಇದನ್ನು ರಾಜಕೀಯ ಮಾಡಲಾಗಿದೆ' ಎಂದು ಹೇಳಿದ್ದಾರೆ.
ಮತ್ತೊಂದೆಡೆ ಪ್ರತಿಕ್ರಿಯಿಸಿರುವ ತರೂರ್, 'ಯಾವ ಮಾನದಂಡದ ಆಧಾರದಲ್ಲಿ ಆಹ್ವಾನ ನೀಡಲಾಗಿದೆ ಗೊತ್ತಿಲ್ಲ. ನಾನು ಖಂಡಿತವಾಗಿಯೂ ಭಾಗಿಯಾಗುತ್ತೇನೆ. ವಿರೋಧ ಪಕ್ಷದ ನಾಯಕರನ್ನು ಆಹ್ವಾನಿಸದೇ ಇರುವುದು ಸರಿಯದ ನಡೆಯಲ್ಲ' ಎಂದಷ್ಟೇ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.