ADVERTISEMENT

ಡಿಸೆಂಬರ್‌ 4ಕ್ಕೆ ರಷ್ಯಾ ಅಧ್ಯಕ್ಷ ಪುಟಿನ್‌ ಭಾರತ ಭೇಟಿ

ಪಿಟಿಐ
Published 28 ನವೆಂಬರ್ 2025, 16:05 IST
Last Updated 28 ನವೆಂಬರ್ 2025, 16:05 IST
ವ್ಲಾಡಿಮಿರ್‌ ಪುಟಿನ್‌
ವ್ಲಾಡಿಮಿರ್‌ ಪುಟಿನ್‌   

ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಡಿಸೆಂಬರ್‌ನಲ್ಲಿ ಎರಡು ದಿನ ಭಾರತ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಬಗ್ಗೆ ವಿದೇಶಾಂಗ ವ್ಯವಹಾರಗಳ ಇಲಾಖೆಯು ಶುಕ್ರವಾರ ಪ್ರಕಟಣೆ ಹೊರಡಿಸಿದೆ. 

‘ಭಾರತ ಭೇಟಿ ವೇಳೆ ಪುಟಿನ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ. ಇದು ದ್ವಿಪಕ್ಷೀಯ ಸಂಬಂಧಗಳು ಮತ್ತು ಉಭಯ ದೇಶಗಳ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸಲಿದೆ. ಜಾಗತಿಕ ವಿಷಯಗಳ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲು ಇದೊಂದು ಅವಕಾಶವಾಗಿದೆ’ ಎಂದು ಅದು ಹೇಳಿದೆ. 

‘ಮೋದಿಯವರ ಆಹ್ವಾನದ ಮೇರೆಗೆ ಪುಟಿನ್‌ ಅವರು, ಭಾರತ–ರಷ್ಯಾದ 23ನೇ ವಾರ್ಷಿಕ ಶೃಂಗಸಭೆಗಾಗಿ ಡಿ. 4ರಿಂದ 5ರವರೆಗೆ ಭಾರತಕ್ಕೆ ಭೇಟಿ ನೀಡಲಿದ್ದಾರೆ’ ಎಂದು ಪ್ರಕಟಣೆ ತಿಳಿಸಿದೆ. 

ADVERTISEMENT

ರಕ್ಷಣೆ, ಭದ್ರತೆ, ವ್ಯಾಪಾರ, ನಾಗರಿಕ ಪರಮಾಣು ಶಕ್ತಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಪರಸ್ಪರ ಸಹಕಾರವನ್ನು ಹೆಚ್ಚಿಸುವತ್ತ ಮೋದಿ– ಪುಟಿನ್‌ ಮಾತುಕತೆ ನಡೆಸಬಹುದು. ಉಕ್ರೇನ್‌ ಮತ್ತು ರಷ್ಯಾ ಸಂಘರ್ಷವೂ ಈ ವೇಳೆ ಪ್ರಸ್ತಾಪವಾಗುವ ಸಾಧ್ಯತೆ ಇದೆ ಎನ್ನಲಾಗಿದೆ. 

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪುಟಿನ್‌ ಅವರನ್ನು ಭೇಟಿಯಾಗಲಿದ್ದು, ಅವರಿಗಾಗಿ ಔತಣಕೂಟವನ್ನು ಆಯೋಜಿಸಲಿದ್ದಾರೆ. 

ಪುಟಿನ್‌ ಅವರು 2021ರಲ್ಲಿ ಕೊನೆಯ ಬಾರಿ ಭಾರತಕ್ಕೆ ಭೇಟಿ ನೀಡಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.