ADVERTISEMENT

ಭಾರತಕ್ಕೆ ಬಂದ ಪುಟಿನ್‌ಗೆ ‘ಭಗವದ್ಗೀತೆ’ ನೀಡಿದ ಮೋದಿ: ಉಭಯ ನಾಯಕರ ಚಿತ್ರಗಳು

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 5 ಡಿಸೆಂಬರ್ 2025, 6:38 IST
Last Updated 5 ಡಿಸೆಂಬರ್ 2025, 6:38 IST
<div class="paragraphs"><p> ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್  ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು&nbsp;ನಿನ್ನೆ (ಗುರುವಾರ) ಆತ್ಮೀಯವಾಗಿ ಬರಮಾಡಿಕೊಂಡರು.</p></div>

ಎರಡು ದಿನಗಳ ಭಾರತ ಪ್ರವಾಸ ಕೈಗೊಂಡಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಪ್ರಧಾನಿ ನರೇಂದ್ರ ಮೋದಿಯವರು ನಿನ್ನೆ (ಗುರುವಾರ) ಆತ್ಮೀಯವಾಗಿ ಬರಮಾಡಿಕೊಂಡರು.

   

ಚಿತ್ರ ಕೃಪೆ: ಎಕ್ಸ್

ಭಾರತದ ಜೊತೆ ಸುಮಾರು 8 ದಶಕಗಳಿಂದ ಕಾಯ್ದುಕೊಂಡು ಬಂದಿರುವ ದ್ವಿಪಕ್ಷೀಯ ಪಾಲುದಾರಿಕೆಯನ್ನು ಮತ್ತಷ್ಟು ಬಲಗೊಳಿಸುವುದಕ್ಕಾಗಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್‌ ಪುಟಿನ್‌ ಅವರು ಗುರುವಾರ ದೆಹಲಿಗೆ ಬಂದಿಳಿದರು.

ADVERTISEMENT

ಉಕ್ರೇನ್‌ ವಿರುದ್ಧ ಯುದ್ಧ ಆರಂಭವಾದ ಬಳಿಕ ಪುಟಿನ್‌ ಅವರು ಭಾರತಕ್ಕೆ ಭೇಟಿ ನೀಡಿರುವುದು ಇದೇ ಮೊದಲು.

ಭಾರತ–ರಷ್ಯಾ 23ನೇ ಶೃಂಗಸಭೆಯ ಮಾತುಕತೆ ಶುಕ್ರವಾರ ನಡೆಯಲಿದ್ದು, ಹಲವು ಪ್ರಮುಖ ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. 

ರಷ್ಯಾದಿಂದ ಯುದ್ಧ ವಿಮಾನಗಳು ಮತ್ತು ವಾಯು ರಕ್ಷಣಾ ವ್ಯವಸ್ಥೆ ಖರೀದಿ ಸಂಬಂಧ ಒಪ್ಪಂದ ಏರ್ಪಡುವ ಸಾಧ್ಯತೆಯಿದೆ. 

ಭಾರತಕ್ಕೆ ಆಗಮಿಸಿರುವ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಭಗವದ್ಗೀತೆಯನ್ನು ಉಡುಗೊರೆಯಾಗಿ ನೀಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.