ಥಾಣೆ: ಕಲು ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ,ಜಿಲ್ಲೆಯ ಮುರ್ಬದ್ ಹಾಗೂ ಶಹಾಪುರ ಪ್ರದೇಶಗಳ ನಡುವಣ ಸಂಪರ್ಕ ಕಲ್ಪಿಸುತ್ತಿದ್ದ ಮೇಲ್ಸೇತುವೆಯನ್ನು ಲೋಕೋಪಯೋಗಿ ಇಲಾಖೆ ಕೆಡವಿದೆ.
ನೂರು ವರ್ಷ ಹಳೆಯದಾದ ಈ ಸೇತುವೆ ಶಿಥಿಲಾವಸ್ಥೆಗೆ ತಲುಪಿದ್ದು, ಬಳಕೆಗೆ ಅಪಾಯಕಾರಿ ಎಂದು ನಿರ್ಧರಿಸಲಾಗಿತ್ತು. ಹೀಗಾಗಿ ಸೇತುವೆಯನ್ನು ಉರುಳಿಸಲಾಗಿದೆ.
ಸದ್ಯ ಅದೇ ಸ್ಥಳದಲ್ಲಿ ಹೊಸ ಮೇಲ್ಸೇತುವೆ ನಿರ್ಮಿಸಲು ಮನವಿ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.