ADVERTISEMENT

ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿ ಮಹಡಿಯಿಂದ ಬಿದ್ದು ಆತ್ಮಹತ್ಯೆ

ಉತ್ತರ ಪ್ರದೇಶದ ರಾಂಪುರದಲ್ಲಿ ನಡೆದ ಘಟನೆ

ಏಜೆನ್ಸೀಸ್
Published 5 ಜುಲೈ 2020, 3:57 IST
Last Updated 5 ಜುಲೈ 2020, 3:57 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ರಾಂಪುರ(ಉತ್ತರಪ್ರದೇಶ): ಕ್ವಾರಂಟೈನ್ ಕೇಂದ್ರದಲ್ಲಿದ್ದ ವ್ಯಕ್ತಿಯೊಬ್ಬ ಮೂರನೇ ಮಹಡಿಯಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಈತನಿಗೆ ಕೊರೊನಾ ಸೋಂಕು ಇದ್ದ ಸಂಬಂಧ ಕ್ವಾರಂಟೈನ್ ಕೇಂದ್ರದಲ್ಲಿ ಇಡಲಾಗಿತ್ತು. ತನ್ನ ಕೊಠಡಿಯಿಂದ ಎಡಬಿಡದೆ ಸುತ್ತಾಡುತ್ತಿದ್ದ ಎನ್ನಲಾಗಿದೆ. ಯಾರೂ ಇಲ್ಲದ ಸಮಯದಲ್ಲಿ ಮಹಡಿಯಿಂದ ಬಿದ್ದು ಸಾವನ್ನಪ್ಪಿದ್ದಾನೆ.

ಈ ಸಂಬಂಧ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಹೇಳಿಕೆ ನೀಡಿದ್ದು, ಆತ ಮದ್ಯವ್ಯಸನಿಯಾಗಿದ್ದ. ಆತನ ವರ್ತನೆ ಸರಿಯಾಗಿರಲಿಲ್ಲ. ಕ್ವಾರಂಟೈನ್ ಕೇಂದ್ರಕ್ಕೆ ಬಂದಾಗಿನಿಂದ ಎಡಬಿಡದೆ ಸುತ್ತಾಡುತ್ತಿದ್ದ. ಯಾರೂ ಇಲ್ಲದಾಗ ಆತ ಕೆಳಗೆ ಬಿದ್ದು ಮೃತಪಟ್ಟಿದ್ದಾನೆ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.