ADVERTISEMENT

ಛತ್ತೀಸಗಡ: ಶಿಕ್ಷಣ, ಸರ್ಕಾರಿ ಉದ್ಯೋಗದಲ್ಲಿ ಶೇ 76ರಷ್ಟು ಮೀಸಲಾತಿ

ರಾಜಕೀಯಪ್ರೇರಿತವಾದ ಈ ನಡೆಯು ಕೋರ್ಟ್‌ನಲ್ಲಿ ನಿಲ್ಲದು: ತಜ್ಞರ ವಿಶ್ಲೇಷಣೆ

ಪಿಟಿಐ
Published 4 ಡಿಸೆಂಬರ್ 2022, 15:10 IST
Last Updated 4 ಡಿಸೆಂಬರ್ 2022, 15:10 IST
ಪ್ರಾತಿನಿಧಿಕ ಚಿತ್ರ 
ಪ್ರಾತಿನಿಧಿಕ ಚಿತ್ರ    

ರಾಯಪುರ: ಮುಂದಿನ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆಗೂ ಮುನ್ನ ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗದಲ್ಲಿ ಶೇ 76ರಷ್ಟು ಮೀಸಲಾತಿ ಏರಿಕೆ ಮಾಡುವಛತ್ತೀಸಗಢ ಸರ್ಕಾರದ ಕ್ರಮವು ರಾಜಕೀಯ ಪ್ರೇರಿತವಾಗಿದ್ದು, ಇದು ನ್ಯಾಯಾಲಯದಲ್ಲಿ ನಿಲ್ಲದು ಎಂದು ರಾಜಕೀಯ ಹಾಗೂ ಕಾನೂನು ತಜ್ಞರು ವಿಶ್ಲೇಷಿಸಿದ್ದಾರೆ.

ಛತ್ತೀಸಗಡ ಹೈಕೋರ್ಟ್ ಈಗಾಗಲೇ ಮೀಸಲಾತಿಯ ಪ್ರಮಾಣವನ್ನು ಶೇ 50ಕ್ಕಿಂತ ಹೆಚ್ಚು ಮಾಡುವಂತಿಲ್ಲ ಎಂದು ಎರಡು ಬಾರಿ ಹೇಳಿದೆ. ಮತ್ತೀಗ ಅದೇ ಮಾತು ಪುನರುಚ್ಚರಿಸುವ ಸಾಧ್ಯತೆ ಇದೆ ಎಂದೂ ತಜ್ಞರು ಹೇಳಿದ್ದಾರೆ.

ಪರಿಶಿಷ್ಟ ಪಂಗಡದ (ಎಸ್‌.ಟಿ) ಅಭ್ಯರ್ಥಿಗಳಿಗೆ ಮೀಸಲಾಗಿರುವ ಭಾನುಪ್ರತಾಪ್‌ಪುರ ವಿಧಾನಸಭಾ ಕ್ಷೇತ್ರದಲ್ಲಿ ಸೋಮವಾರ ನಡೆಯಲಿರುವ ಉಪಚುನಾವಣೆಗೂ ಮುನ್ನ ಸರ್ಕಾರ ಮೀಸಲಾತಿ ಹೆಚ್ಚಳ ಮಾಡಿದೆ.

ADVERTISEMENT

ರಾಜ್ಯದ ವಿವಿಧ ವರ್ಗಗಳ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರಿ ಉದ್ಯೋಗದಲ್ಲಿ ನೇಮಕ ಮತ್ತು ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶಕ್ಕೆ ಸಂಬಂಧಿಸಿದ ಎರಡು ತಿದ್ದುಪಡಿ ಮಸೂದೆಗಳನ್ನು ಛತ್ತೀಸಗಡ ವಿಧಾನಸಭೆ ಶುಕ್ರವಾರ ಅಂಗೀಕರಿಸಿದ್ದು, ಒಟ್ಟು ಮೀಸಲಾತಿಯ ಪ್ರಮಾಣವನ್ನು ಶೇ 76ಕ್ಕೆ ಏರಿಕೆ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.