ನವದೆಹಲಿ: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ನಡೆದಿದೆ ಎಂಬ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುವ ಅಗತ್ಯವಿಲ್ಲ ಎಂದುನೀಡಿರುವ ತೀರ್ಪನ್ನು ಮರುಪರಿಶೀಲಿಸಬೇಕು ಎಂದು ಕೋರಿಆಮ್‌ಆದ್ಮಿ ಪಾರ್ಟಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಸೇರಿದಂತೆ ಕೆಲವರು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಈ ಹಿಂದೆ ತನಿಖೆಗೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ನಾಲ್ಕು ಅರ್ಜಿಗಳನ್ನು ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ನೇತೃತ್ವದ ಪೀಠವು ಡಿಸೆಂಬರ್ 14ರಂದು ವಜಾ ಮಾಡಿತ್ತು. ಯುದ್ಧ ವಿಮಾನ ಖರೀದಿ ಒಪ್ಪಂದ ಪ್ರಕ್ರಿಯೆಯಲ್ಲಿ ಯಾವುದೇ ಅನುಮಾನಗಳಿಲ್ಲ ಎಂದು ಅಭಿಪ್ರಾಯಪಟ್ಟಿತ್ತು.
ಈ ಮಧ್ಯೆ ಎಎಪಿ ಪಕ್ಷದ ಸಂಜಯ್ ಸಿಂಗ್, ವಕೀಲ ಎಂ.ಎಲ್ .ಶರ್ಮಾ ಹಾಗೂ ವಿನಿತ್ ಧಂಡಾ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲದೇ ಬಿಜೆಪಿಯ ಬಂಡಾಯ ನಾಯಕರಾದ ಅರುಣ್ ಶೌರಿ, ಯಶವಂತ ಸಿನ್ಹಾ ಹಾಗೂ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಹ ಪ್ರತ್ಯೇಕ ಅರ್ಜಿ ಸಲ್ಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.