ADVERTISEMENT

ಸಂಸತ್ತಿನ ಹೊರಗೆ ಕಾಗದದ ವಿಮಾನ ಹಾರಿಸಿ ಕಾಂಗ್ರೆಸ್ ಸಂಸದರ ಪ್ರತಿಭಟನೆ 

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2019, 7:42 IST
Last Updated 13 ಫೆಬ್ರುವರಿ 2019, 7:42 IST
   

ನವದೆಹಲಿ: ರಫೇಲ್ ಒಪ್ಪಂದದ ಬಗ್ಗೆ ನರೇಂದ್ರ ಮೋದಿ ಸರ್ಕಾರ ವಿರುದ್ಧ ಘೋಷಣೆ ಕೂಗಿದ ಕಾಂಗ್ರೆಸ್ ಸಂಸದರು ಸಂಸತ್ತಿನ ಹೊರಗೆ ಕಾಗದದ ವಿಮಾನ ಹಾರಿಸಿ ಪ್ರತಿಭಟನೆ ನಡೆಸಿದ್ದಾರೆ.

ರಾಹುಲ್ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಮೋದಿ ಸರ್ಕಾರ ಯುದ್ಧ ವಿಮಾನ ಖರೀದಿ ಒಪ್ಪಂದದಲ್ಲಿ ಹಗರಣ ನಡೆಸಿದೆ ಎಂದು ಆರೋಪಿಸಿ ಪೋಸ್ಟರ್ ಪ್ರದರ್ಶಿಸಿದ್ದಾರೆ.

ಸಂಸತ್ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆದಿದೆ. ಪ್ರತಿಭಟನೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭಾಗಿಯಾಗಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.